ನಶಾಮುಕ್ತ ಭಾರತ ಅಭಿಯಾನ: 8,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾವಿಧಿ ಸ್ವೀಕಾರ

ನಶಾಮುಕ್ತ ಭಾರತ ಅಭಿಯಾನ: 8,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾವಿಧಿ ಸ್ವೀಕಾರ Drug-Free India Campaign: Over 8,500 students take anti-drug pledge

ಲೋಕದರ್ಶನ ವರದಿ 

       ಬಳ್ಳಾರಿ 19: ಕೇಂದ್ರ ಸರ್ಕಾರದ ‘ನಶಾಮುಕ್ತ ಭಾರತ ಅಭಿಯಾನ' ಯೋಜನೆಯ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಮೈತ್ರಿ ವ್ಯಸನ ಮುಕ್ತ ಕೇಂದ್ರದ ಸಂಯುಕ್ತಾಶ್ರಯದಲ್ಲಿ 6ನೇ ಮಾದಕ ದ್ರವ್ಯ ಸೇವನೆ ವಿರೋಧಿ ದಿನವನ್ನು ಮಂಗಳವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. 

ಈ ಜಾಗೃತಿ ಅಭಿಯಾನದ ಅಂಗವಾಗಿ ನಗರದ ವಿವಿಧ ಕಾಲೇಜುಗಳು ಮತ್ತು ಪ್ರೌಢಶಾಲೆಗಳಲ್ಲಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸಿ, ಸಾಮೂಹಿಕ ಪ್ರತಿಜ್ಞಾವಿಧಿ ಬೋಧಿಸಲಾಯಿತು. 

ಕಾರ್ಯಕ್ರಮದಲ್ಲಿ ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ನಿರ್ವಹಣಾ ಕಾಲೇಜು, ಮೊಹಮ್ಮದಿಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜು, ವಾರ್ಡ್ಲಾ ಪದವಿ ಪೂರ್ವ ಕಾಲೇಜು, ಸೈಂಟ್ ಜೋಸೆಫ್ ಕಾಲೇಜು, ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಪದವಿ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜು ಸೇರಿದಂತೆ ನಗರದ ವಿವಿಧ ಶಿಕ್ಷಣ ಸಂಸ್ಥೆಗಳ ಸುಮಾರು 8,500ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಏಕಕಾಲದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್‌.ಎಂ., ಕಾಲೇಜಿನ ಪ್ರಾಚಾರ್ಯ ಡಾ. ರಾಮಕೃಷ್ಣ, ರಾಜೇಶ್ವರಿ ಪಾಟೀಲ್, ಮುಖಂಡರಾದ ಮೊಹಮ್ಮದ್ ಮುಜಾಮಿಲ್, ಡಿ.ಡಿ.ಆರ್‌.ಸಿ ನೋಡಲ್ ಅಧಿಕಾರಿ ನಾಗೇಂದ್ರ, ಜಿಲ್ಲಾ ಸಂಯೋಜಕ ಟೇಕರಾಜ್, ಎಂ.ಆರ್‌.ಡಬ್ಲ್ಯೂ ರಾಣಿ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.