ಮಾದಕ ವಸ್ತು ಸೇವನೆಯು ಅಪಾಯಕಾರಿ : ಡಾ. ಯು. ಎಮ್. ಶಾಗೋಟಿ
Drug abuse is dangerous: Dr. U. M. Shagoti
ಗೋಕಾಕ, 16 : ಮಾದಕ ವಸ್ತು ಸೇವನೆಯು ಇಂದು ಮಾನವ ಕುಲಕ್ಕೆ ಅತ್ಯಂತ ಅಪಾಯಕಾರಿಯಾಗಿದೆ ಎಂದು ಜೆ. ಎಸ್. ಎಸ್. ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಯು. ಎಮ್. ಶಾಗೋಟಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಗೋಕಾಕ ಶಿಕ್ಷಣ ಸಂಸ್ಥೆಯ ಜೆ. ಎಸ್. ಎಸ್. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಗೋಕಾಕ ಇಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ “ನಶಾ ಮುಕ್ತ ಭಾರತ ಅಭಿಯಾನ”ದಡಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ. ಯು. ಎಮ್. ಶಾಗೋಟಿ ಇವರು ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಎನ್. ಎಸ್. ಘಟಕ 1 ಮತ್ತು 2ರ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿಯನ್ನು ಘಟಕ -2ರ ಕಾರ್ಯಕ್ರಮ ಅಧಿಕಾರಿ ಎಂ. ವ್ಹಿ. ಗೊರಗುದ್ದಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಡಾ. ಬಿ. ಎಮ್. ತುರಡಗಿಯವರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯವೆಂದು ತಿಳಿಸಿದರು. ಉಪ-ಪ್ರಾಚಾರ್ಯರಾದ ಡಾ. ಆರ್. ಎಸ್. ಬಳಿಗಾರ, ಎನ್.ಎಸ್.ಎಸ್. ಘಟಕ-1ರ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಸಿ. ಎ. ಮಸರಗುಪ್ಪಿ ಹಾಗೂ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂ ಸೇವಕರು ಹಾಗೂ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 