ಕಂಠಪೂರ್ತಿ ಕುಡಿದ ವೈದ್ಯನಿಂದ ಹೃದ್ರೋಗಿಗೆ ಚಿಕಿತ್ಸೆ
Drunk doctor treats heart patient
ಬೆಳಗಾವಿ 22: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಬೆಳಗಾವಿ ಜಿಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ನಡೆದುಕೊಂಡಿರುವ ರೀತಿಯನ್ನು ನೋಡಿದರೆ, ಇವರ ಬಳಿ ಚಿಕಿತ್ಸೆ ಪಡೆಯುವವರ ಸ್ಥಿತಿ ಗೋವಿಂದ ಎನ್ನುವಂತಾಗಿದೆ.
ಬೆಳಗಾವಿ
ಜಿಲ್ಲೆಯ ಸವದತ್ತಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಕಂಠಪೂರ್ತಿ ಕುಡಿದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯ ತಪಾಸಣೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಳೆದ
ರಾತ್ರಿ ಹೃದಯ ಸಂಬಂಧಿ ಕಾಯಿಲೆಯಿಂದ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಫುಲ್ ಕುಡಿದ ಮತ್ತಿನಲ್ಲಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಸುರೇಶ್ ಹಿತ್ತಲಮನಿ
ರೋಗಿಯ ತಪಾಸಣೆ ನಡೆಸಿದ್ದಾರೆ. ಸರಿಯಾಗಿ ನಿಲ್ಲುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿದ್ದವರನ್ನು ರೋಗಿಯ ಸಂಬಂಧಿಕರು ತಪಾಸಣೆ ನಡೆಸದಂತೆ ಹೇಳಿದರೂ ಕೇಳದೇ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ
ರೋಗಿ ಸಂಬಂಧಿಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ನರ್ಸ್ ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಹಲವಾರು
ಬಾರಿ ಜನಪ್ರತಿನಿಧಿಗಳ ಬಳಿ ದೂರು ನೀಡಿದರೂ ಸಹ ಪರಿಸ್ಥಿತಿಯಲ್ಲಿ ಯಾವುದೇ
ಬದಲಾವಣೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 