ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗಿಗಳಿಗೆ ಇ-ಕೆವೈಸಿ ಕಡ್ಡಾಯ
E-KYC mandatory for National Rural Employment Guarantee Scheme employees
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗಿಗಳಿಗೆ ಇ-ಕೆವೈಸಿ ಕಡ್ಡಾಯ
ಗದಗ 08: ಮಹಾತ್ಮಗಾಂಧಿ ಉದ್ಯೋಗ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗಗಳಿಗೆ ಎನ್‌ಎಂಎಂಎಸ್ ಆ್ಯಪ್ ಮೂಲಕ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದ್ದು ಸಮರೋಪಾದಿಯಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಗ್ರಾಪಂ ಸಿಬ್ಬಂದಿಗೆ ಸೂಚಿಸಿದರು.ಗದಗ ತಾಲೂಕು ಪಂಚಾಯತಿಯಿಂದ ಬುಧವಾರ ಗೂಗಲ್ ಮೀಟ್ ಮೂಲಕ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 27 ಗ್ರಾಮ ಪಂಚಾಯತಿಗಳಿದ್ದು, ಒಟ್ಟು 52,022 ಸಕ್ರಿಯ ಉದ್ಯೋಗ ಚೀಟಿಗಳಿವೆ. ಸದ್ಯ ಸಕ್ರಿಯ ಉದ್ಯೋಗ ಚೀಟಿಗಳಿಗೆ ಇ- ಕೆವೈಸಿ ಮಾಡುವಂತೆ ಆಯುಕ್ತಾಲಯದಿಂದ ಆದೇಶ ಬಂದಿದೆ. ಅದರಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು.
ಜೊತೆಗೆ ಇ- ಕೆವೈಸಿ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಸಕ್ರಿಯವಾಗಿರುವ ಜಾಬ್ಕಾರ್ಡ್ಗಳಿಗೆ ಇ-ಕೆವೈಸಿ ಮಾಡಿಸುವಂತೆ ಸೂಚಿಸಿದರು.ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ (ಉಖಾ) ಕುಮಾರ ಪೂಜಾರ ಅವರು ಮಾತನಾಡಿ, ಗದಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಗ್ರಾಪಂಗಳು ಗದಗ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಬರುತ್ತವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಸಕ್ರಿಯ ಉದ್ಯೋಗ ಚೀಟಿಗಳು ಗದಗ ತಾಲೂಕಿನಲ್ಲಿವೇ. ಗ್ರಾಮ ಪಂಚಾಯತಿಯ ಗ್ರಾಮ ಕಾಯಕ ಮಿತ್ರರು, ಬಿಎಫ್ಟಿ, ಡಿಇಒ ಮತ್ತು ಕಾಯಕ ಬಂಧುಗಳನ್ನು ಸಕ್ರಿಯವಾಗಿ ಇ-ಕೆವೈಸಿ ಕಾರ್ಯದಲ್ಲಿ ತೊಡಗಿಸಿಕೊಂಡು ಪೂರ್ಣಗೊಳಿಸುವಂತೆ ತಿಳಿಸಿದರು.ಕೋಟ್ಗದಗ ತಾಲೂಕು ವ್ಯಾಪ್ತಿಯ 27 ಗ್ರಾಮ ಪಂಚಾಯತಿಗಳ ಎಲ್ಲ ನೋಂದಾಯಿತ ಸಕ್ರಿಯ ಕೂಲಿಕಾರರು ಇ-ಕೆವೈಸಿ ಮೂಲಕ ಮಾಹಿತಿ ನವಿ?ಕರಣ ಮಾಡಿಕೊಳ್ಳಲು ಅ. 31ರ ಒಳಗಾಗಿ ಮಾಡಿಸುವುದು ಕಡ್ಡಾಯವಾಗಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 