ಅಸಂಘಟಿತ ವಲಯದ ಕಾರ್ಮಿಕರನ್ನು ನೊಂದಾಯಿಸುವ ವೇದಿಕೆ ಇ-ಶ್ರಮ
2017-18ನೇ ಸಾಲಿನಲ್ಲಿ ರಾಷ್ಟ್ರೀಯ ಅಂಕಿ ಅಂಶಗಳ ಕಛೇರಿಯು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದಾದ್ಯಂತ ಸುಮಾರು 38 ಕೋಟಿ ಕಾರ್ಮಿಕರು ಅಸಂಘಟಿತ ವರ್ಗಗಳಲ್ಲಿ ತೊಡಗಿಕೊಂಡಿರುತ್ತಾರೆ. ಪ್ರಸ್ತುತ ಅಸಂಘಟಿತ ಕಾರ್ಮಿಕರ ಕೇಂದ್ರೀಕೃತ ದತ್ತಾಂಶ ಲಭ್ಯವಿರುವುದಿಲ್ಲ. ಅಂತಹ ಕೇಂದ್ರೀಕೃತ ದತ್ತಾಂಶದ ಅಲಭ್ಯತೆ0ು ಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ, ವಲಸೆ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೋಪಾ0ು ಕಲ್ಪಿಸುವುದು ಕಷ್ಟಸಾಧ್ಯವಾಗಿರುತ್ತದೆ. ಅಸಂಘಟಿತ ಹಾಗೂ ವಲಸೆ ಕಾರ್ಮಿಕರ ಸಮಗ್ರ ದತ್ತಾಂಶವು ಅವರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ವಿಸ್ತರಿಸಲು ಸಹಾಯಕವಾಗಿದೆ. ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಕ್ರಮ ಕೈಗೊಂಡಿದೆ.
ಆಧಾರ್ ಸಂಖ್ಯೆಗೆ ಜೋಡಣೆಯಾದ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು, ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ಇ-ಶ್ರಮ ಪೋರ್ಟಲ್ ಅನ್ನು (www.eshram.gov.in) ಅಭಿವೃದ್ಧಿಪಡಿಸಿದೆ. ಇದು ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ವಿವರ ಇತ್ಯಾದಿ ವಿವರಗಳನ್ನು ಒಳಗೊಂಡಿರುತ್ತದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು. ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು ಇತರೆ ವರ್ಗಗಳಡಿ ನೋಂದಣಿಯಾಾಗಬಹುದಾಗಿದೆ.
ನೊಂದಣಿಯಿಂದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ ಒಂದು ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಪ್ರಯೋಜನ ಪಡೆಯಬಹುದು. ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷ ಪರಿಹಾರ. ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್ 19 ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ನೀಡಲು ದತ್ತಾಂಶವನ್ನು ಬಳಸಿಕೊಳ್ಳಬಹುದಾಗಿದೆ.
ನೋಂದಣಿಗೆ 16 ರಿಂದ 59 ವಯೋಮಾನದವರು ಅರ್ಹರಾಗಿರುತ್ತಾರೆ. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. ಆಧಾರ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು ಅವಶ್ಯಕವಾಗಿರುತ್ತದೆ.
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ) ಗ್ರಾಮ ಓನ್‌ಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೆ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ. ಇದು ದೇಶದಾದ್ಯಂತ ಹಾಗೂ ಜೀವಿತಾವದಿಯ ಮಾನ್ಯತೆ ಹೊಂದಿರುತ್ತದೆ ಎಂದು ಹೇಳಲಾಗುತ್ತದೆ.
ಜಿಲ್ಲೆಯ ಹರ್ತಿ ಗ್ರಾಮದಲ್ಲಿ ಕಳೆದ ಫೆಬ್ರುವರಿ ಮಾಹೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಸಂದರ್ಭದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಸಂಘಟಿತ ಕಾರ್ಮಿಕರ ವರ್ಗಗಳವರಿಗೆ ಇ-ಶ್ರಮ ಕಾರ್ಡನ್ನು ವಿತರಿಸಿ ಕಾರ್ಮಿಕ ಇಲಾಖೆಯ ಯೋಜನೆಗಳ ಕುರಿತು ಅರಿವು ಮೂಡಿಸಲಾಯಿತು.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24ಥ7) ಇ-ಶ್ರಮ್ ಸಹಾಯವಾಣಿ 14434 ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ದೂರುಗಳನ್ನು ಸಲ್ಲಿಸಲು URL: www.grms.eshram.gov.in ಗೆ ಭೇಟಿ ನೀಡಬಹುದಾಗಿದೆ. ಅಥವಾ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳು ಹಾಗೂ ಗ್ರಾಮ ಓನ್ ಕೇಂದ್ರಗಳಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ.
- ಮಂಜುನಾಥ ಹೊಸಳ್ಳಿ
ಗದಗ
- * * * -
8