ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ: ನಟ ಯಶ್
ಬೆಂಗಳೂರು, ಫೆ.18 :ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ.. ಎಂದು ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ, ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ...ಎಂದು ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ... ಓಂ ಶಾಂತಿ...ಎಂದು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.ತಮ್ಮ ವೈಯಕ್ತಿಕ ಕಾರಣಕ್ಕಾಗಿ ರಾಮಕೃಷ್ಣ ಎಂಬ ಯುವಕ ಆತ್ಮಹತ್ಯೆ ಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ವೊಂದು ಬರೆದಿಟ್ಟಿದ್ದರು.ನನ್ನ ಅಂತ್ಯಕ್ರಿಯೆಗೆ ರಾಕಿಂಗ್ ಸ್ಟಾರ್ ಯಶ್ ಅಣ್ಣ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ ಭಾಗವಹಿಸಬೇಕು. ನಾನು ನಿಮ್ಮಿಬ್ಬರ ಅಪ್ಪಟ ಅಭಿಮಾನಿ ಎಂದು ಕೋಡಿ ದೊಡ್ಡಿ ರಾಮಕೃಷ್ಣ ಅವರು ಉಲ್ಲೇಖಿಸಿದ್ದರು.