ಚಿಕ್ಕೊಪ್ಪ ಗ್ರಾಮದ ನರೇಗಾ ಕಾಮಗಾರಿ ಸ್ಥಳಕ್ಕೆ ಇಒ ಭೇಟಿ: ಪರೀಶೀಲನೆ
EO visit to Narega work site at Chikkoppa village: inspection
ಲೋಕದರ್ಶನ ವರದಿ
ಯಲಬುರ್ಗಾ 23 : ನರೇಗಾ ಯೋಜನೆಯಂತೆಯೇ ವಿಬಿಜಿ ರಾಮ್ ಜಿ ಕೂಡ ಅಕುಶಲ ಕೂಲಿಕಾರರಿಗೆ ನಿರಂತರ ಕೆಲಸ ಇರುವುದರಿಂದ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಇದರಲ್ಲಿ 125 ದಿನಗಳ ಕೆಲಸ ನೀಡಲಾಗುವುದು ಎಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೀಲಗಂಗಾ ಬಬಲಾದ ತಿಳಿಸಿದರು. ತಾಲೂಕಿನ ಬಳೂಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟೀನೀಡಿ ಪರೀಶೀಲಿಸಿ ಕೂಲಿಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಜು.1 ರಿಂದ ವಿಬಿಜಿರಾಮ್ ಜಿ ಯೋಜನೆ ಜಾರಿಗೆ ಬರಲಿದ್ದು, ಅದರಲ್ಲೂ ಕೂಡ ನಿರಂತರ ಕೆಲಸ ಲಭ್ಯ ಇರಲಿದೆ.
ಹೀಗಾಗಿ ಆತಂಕ ಪಡುವ ಅವಶ್ಯಕತೆ ಇಲ್ಲ. ನರೇಗಾ ಯೋಜನೆಯಡಿ ಸರಿಯಾಗಿ ಕೆಲಸ ನಿರ್ವಹಿಸಿ ವೇತನ ಪಡೆಯಬಹುದು ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಅಕುಶಲಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಿ, ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತುಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜೊತೆಯಾಗಿ ನಿಂತಿರುವ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕರು, ಎನ್‌ಆರ್ ಎಲ್‌ಎಂ ಸಂಯೋಜಕರು, ಆರ್ ಜಿಪಿಆರ್ ಫೆಲೊ, ಜಿಕೆಎಂ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 