ಅಂತರರಾಷ್ಟ್ರೀಯ

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ!

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ!

ಕೊಲಂಬೊ: ಜುಲೈ 18 : ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸೋಮವಾರದಿಂದ ತುರ್ತು ಪರಿಸ್ಥಿತಿ ಹೇರಲಾಗಿದೆ.

ಡೈಲಿ ಮಿರರ್ ವರದಿಯ ಪ್ರಕಾರ, ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಸಂವಿಧಾನದ 40(1)(ಸಿ) ವಿಧಿ, ಸಾರ್ವಜನಿಕ ಸುರಕ್ಷತಾ ಸುಗ್ರೀವಾಜ್ಞೆ (ಅಧ್ಯಾಯ 40)ದ 02 ನೇ ವಿಧಿ, 1959ರ ಕಾಯಿದೆ ಸಂಖ್ಯೆ 08, ಆಕ್ಟ್ ನಂ. 1978 ರ 6 ಮತ್ತು 1988 ರ ಕಾಯಿದೆ ಸಂಖ್ಯೆ 28 ರ ಮೂಲಕ ಅವರಿಗೆ ನೀಡಲಾದ ಅಧಿಕಾರಗಳ ಆಧಾರದ ಮೇಲೆ ಈ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಸಾರ್ವಜನಿಕ ಸುರಕ್ಷತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ದೃಷ್ಟಿಯಿಂದ ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ಗೆಜೆಟ್ ನಲ್ಲಿ ಉಲ್ಲೇಖಿಸಲಾಗಿದೆ.

ದ್ವೀಪರಾಷ್ಟ್ರ ಶ್ರೀಲಂಕಾ, 1948ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ನಂತರ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ.

ಸುದ್ದಿ ಓದಿ