ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು,ಜು.20
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್,ಪರೀಕ್ಷೆಯಿಲ್ಲದೆಯೇ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿರುವುದಾಗಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ ಸುರೇಶ್ ಕುಮಾರ್,
ಎಸ್ ಎಸ್ ಎಲ್ ಸಿ ಅಂಕಗಳಲ್ಲಿ ಶೇಕಡಾ 45ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯ ಶೇಕಡಾ 45 ಹಾಗೂ ಆಂತರಿಕ ಮೌಲ್ಯಮಾಪನದ ಶೇಕಡಾ 10ರಷ್ಟು ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಬಾರಿ ದ್ವಿತೀಯ ಪಿಯುಸಿಯಲ್ಲಿ 6,66,467 ವಿದ್ಯಾರ್ಥಿಗಳಿದ್ದರು. ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.‌
 ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 4,50,706 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.1,47,056
ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 68,729 ವಿದ್ಯಾರ್ಥಿಗಳು ಜಸ್ಟ್ ಪಾಸಾಗಿದ್ದಾರೆ.
 ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.‌ ಫಲಿತಾಂಶ ತಿರಸ್ಕರಿಸುವ ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು,ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಜುಲೈ 30 ರೊಳಗೆ ಹೆಸರು ನೋಂದಾಯಿಸಬೇಕು.‌ ಈ ವಿದ್ಯಾರ್ಥಿಗಳಿಗೆ ಆಗಸ್ಟ್ 19ರಿಂದ ಸೆಪ್ಟೆಂಬರ್ 3 ರೊಳಗೆ ಪರೀಕ್ಷೆ ನಡೆಸಲಾಗುವುದು ಎಂದರು.

ಸುದ್ದಿ ಓದಿ