ಶಿಕ್ಷಣಾಧಿಕಾರಿ ಪ್ರಭಯ್ಯ ಚಿಕ್ಕಮಠ ನಿವೃತ್ತಿ

ಶಿಕ್ಷಣಾಧಿಕಾರಿ ಪ್ರಭಯ್ಯ ಚಿಕ್ಕಮಠ ನಿವೃತ್ತಿ  Education Officer Prabhayya Chikkamath retires

ಲೋಕದರ್ಶನ ವರದಿ 

ಧಾರವಾಡ 28: ಹಿರಿಯ ಕೆಇಎಸ್ ಅಧಿಕಾರಿ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯದ ಶಿಕ್ಷಣಾಧಿಕಾರಿ ಪ್ರಭಯ್ಯ ಕಲ್ಲಯ್ಯ ಚಿಕ್ಕಮಠ ಮೇ-30ರಂದು ತಮ್ಮ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.  

1999ರ ತಂಡದ ಕರ್ನಾಟಕ ಶಿಕ್ಷಣ ಸೇವೆ (ಕೆಇಎಸ್) ಅಧಿಕಾರಿಯಾಗಿರುವ ಇವರು, ಸರಕಾರಿ ಪ್ರೌಢಶಾಲಾ ಮುಖ್ಯಾಧ್ಯಾಪಕರಾಗಿ, ನಗರದ ಡಯಟ್ ಉಪನ್ಯಾಸಕರಾಗಿ, ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಜೊತೆಗೆ ತತ್ಸಮಾನ ವೃಂದದ ಹಲವಾರು ಹುದ್ದೆಗಳಲ್ಲಿ ಒಟ್ಟು 32 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆಸಲ್ಲಿಸಿದ್ದಾರೆ.  

ಬೀಳ್ಕೊಡುಗೆ : ಮೇ-30 ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಡೆಪ್ಯೂಟಿ ಚೆನ್ನಬಸಪ್ಪ ಸಮಾವೇಶ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಭಯ್ಯ ಚಿಕ್ಕಮಠ ಅವರನ್ನು ಶಾಲಾ ಶಿಕ್ಷಣ ಇಲಾಖೆ, ವಿವಿಧ ಶಿಕ್ಷಕ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿ ಬೀಳ್ಕೊಡಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.