ಹಿಳೆಯರಿಗೆ ಶಿಕ್ಷಣ, ಸಮಾನ ಅವಕಾಶ ಅಗತ್ಯ: ಡಾ. ಸವಿತಾ ಸೋನೋಳಿ
Education and equal opportunities are essential for the elderly: Dr. Savita Sonoli
ಬಳ್ಳಾರಿ 20: ಮಹಿಳೆಯರು ಬೆಳೆದರೆ ಕುಟುಂಬ, ಸಮಾಜ ಹಾಗೂ ದೇಶದ ಪ್ರಗತಿ ಸಾಧ್ಯ. ಮಹಿಳೆಯರಿಗೆ ಶಿಕ್ಷಣ, ಸ್ವಾತಂತ್ರ್ಯ, ಸಮಾನ ಅವಕಾಶ ಮತ್ತು ಸುರಕ್ಷತೆ ದೊರೆತಾಗ ತಮ್ಮ ಜೀವನದ ಕುರಿತು ಸ್ವತಂತ್ರ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳುತ್ತಾರೆ ಎಂದು ಆರ್.ವೈ.ಎಂ. ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಚಾರ್ಯೆ ಡಾ. ಸವಿತಾ ಸೋನೋಳಿ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಬಳ್ಳಾರಿ ತಾಲೂಕು ಘಟಕದ ವತಿಯಿಂದ ನಗರದ ಶರಣ ಸಾಹಿತ್ಯ ಕರಡೀಶ ವಿದ್ಯಾರ್ಥಿನಿಯರ ಉಚಿತ ಪ್ರಸಾದ ನಿಲಯದಲ್ಲಿ ಬುಧವಾರ ಆಯೋಜಿಸಿದ್ದ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಸಂಪೂರ್ಣ ಸ್ಥಾನಮಾನ ದೊರೆಯಬೇಕು. ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು, ದುರುಪಯೋಗಪಡಿಸಿಕೊಳ್ಳಬಾರದು. ಒಬ್ಬ ಮಹಿಳೆ ಶಿಕ್ಷಣ ಪಡೆದರೆ ಒಂದು ಕುಟುಂಬವೇ ಶಿಕ್ಷಣ ಪಡೆದಂತಾಗುತ್ತದೆ ಎಂದರು.
ದತ್ತಿ ಉಪನ್ಯಾಸ ನೀಡಿದ ಕನ್ನಡ ಶಿಕ್ಷಕಿ ಕುಮಾರಿ ವಸುಧಾ ಧಾರವಾಡ ಅವರು ‘ಧರ್ಮವನ್ನು ಉಳಿಸುವಲ್ಲಿ ಮಹಿಳೆಯರ ಪಾತ್ರ’ ವಿಷಯ ಕುರಿತು ಮಾತನಾಡಿ, ಧರ್ಮವೆಂದರೆ ಕೇವಲ ಆಚರಣೆಯಲ್ಲ. ಸತ್ಯ, ನ್ಯಾಯ, ನೀತಿ, ಮಾನವೀಯತೆ, ಕರ್ತವ್ಯ, ಕರುಣೆ ಹಾಗೂ ಸತ್ಕಾರ್ಯಗಳನ್ನು ಪಾಲಿಸುವ ಜೀವನ ಮೌಲ್ಯವೇ ಧರ್ಮ ಎಂದರು.
ಈ ಮೌಲ್ಯಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಕೊಂಡೊಯ್ಯುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಕ್ಕಳಿಗೆ ಸತ್ಯ, ಪ್ರಾಮಾಣಿಕತೆ ಮತ್ತು ಕರುಣೆಯಂತಹ ಮೌಲ್ಯಗಳನ್ನು ಕಲಿಸಿದಾಗ ಅವರು ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಾರೆ ಎಂದು ಹೇಳಿದರು. ಮಹಿಳಾ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಪ್ರಮುಖ ಕೊಡುಗೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಹಾವಿನಾಳ ಶರಣಬಸಪ್ಪ, ಗುರುಪಾದಯ್ಯ ಕಲ್ಮಠ, ಶಿಲ್ಪಾ ಬೆಳಗಲ್, ಪ್ರಭಯ್ಯ, ಜಿಲ್ಲಾ ಅಧ್ಯಕ್ಷ ಡಾ. ನಿಷ್ಠಿ ರುದ್ರ್ಪ, ದತ್ತಿದಾನಿಗಳಾದ ಎಚ್. ಚಂದ್ರಶೇಖರಗೌಡ, ಸುಶೀಲಾ ಶಿರೂರು, ಎನ್.ಡಿ. ವೆಂಕಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮೆಟ್ರಿ ಮೃತ್ಯುಂಜಯ ವಹಿಸಿದ್ದರು. ನಾಗರೆಡ್ಡಿ ಕೆ.ವಿ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಣಬಸವ ಎಂ. ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 