ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಶಕ್ತಿಯನ್ನು ಹೊರಗೆಳೆಯುವುದೇ ಶಿಕ್ಷಣ: ಬಗಲಿ
ಇಂಡಿ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಶಕ್ತಿಯನ್ನು ಹೊರಗೆಳೆಯುವುದೇ ಶಿಕ್ಷಣ, ಮಕ್ಕಳಲ್ಲಿ ವಿಭಿನ್ನವಾದ ಚಟುವಟಿಕೆಗಳು ಗುಪ್ತವಾಗಿರುತ್ತವೆ ಶಿಕ್ಷಕರು ಅವುಗಳನ್ನು ಹೆಕ್ಕಿ ತಗೆಯುವ ಕೆಲಸ ನಡೆಯಬೇಕು ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಬಗಲಿ ಹೇಳಿದರು.
ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ಸೌ. ಎ.ಜಿ.ಗಾಂಧಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಇಂಗ್ಲೀಷ್ ಹಾಗೂ ಹಿಂದಿ ವಿಷಯಗಳ ಕಾರ್ಯಾಗಾರ ಹಾಗೂ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ನಿಂತ ನೀರಲ್ಲ. ಸದಾ ಹರಿಯುವ ಪ್ರವಾಹವಿದ್ದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಸ್ಮಜನಾತ್ಮಕ ಚಟುವಟಿಕೆಗಳನ್ನು ಶಿಕ್ಷಕರು ರೂಡಿಸಬೇಕು. ಇಂಗ್ಲೀಷ, ಹಿಂದಿ, ಗಣಿತ ವಿಷಯಗಳು ಕಬ್ಬಿಣದ ಕಡಲೆಕಾಯಿ ಎನ್ನುತ್ತಾರೆ ಇದನ್ನು ಶಿಕ್ಷಕರು ಸರಳವಾಗಿ ತಿಳಿಯುವಂತೆ ಭೋದನೆ ಮಾಡಬೇಕು. ನಿರಂತರ ಓದವುದರಿಂದ ಭಾಷೆಗಳು ಮನನವಾಗುತ್ತವೆ. ಹಿಂದಿ, ಇಂಗ್ಲೀಷ ವಿಷಯಗಳ ಕಾಯಾಗಾರ ಹಾಗೂ ವಸ್ತುಪ್ರದರ್ಶನ ಉದ್ದೇಶ ಕಲಿಕೆಗೆ ಪ್ರೇರಣೆಯಾಗುತ್ತದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಜ ಬಿರಾದಾರ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಈ ತೆರನಾದ ಚಟುವಟಿಕೆಗಳಿಂದ ಪ್ರತಿಭಾನ್ವಿತ ಮನೋಭಾವ ಹೆಚ್ಚಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಬಹಳ ಸಹಕಾರಿಯಾಗುತ್ತದೆ ಎಂದರು.
ಇಂಗ್ಲೀಷ್ ವಿಷಯದ ಸಂಪನ್ಮೂಲ ಶಿಕ್ಷಕರಾದ ವಾಯ್.ಜಿ. ಬಿರಾದಾರ ಹಾಗೂ ಹಿಂದಿ ವಿಷಯ ಸಂಪನ್ಮೂಲ ಶಿಕ್ಷಕರಾದ ರವಿ ಪೋಳ ವಿದ್ಯಾರ್ಥಿನಿಯರಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿ ಹಾಗೂ ಪ್ರಶ್ನೆ ಪತ್ರಿಕೆಯ ನೀಲನಕ್ಷೆ ಕುರಿತು ವಿವರಿಸಿದರು.
ಸಂಸ್ಥೆಯ ಸಹಕಾರ್ಯದರ್ಶಿ ಸಿದ್ದಣ್ಣ ತಾಂಬೆ, ನಿರ್ದೇಶಕ ಭೀಮನಗೌಡ ಪಾಟೀಲ, ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಕುಲಕರ್ಣಿಯವರು ವೇದಿಕೆಯಲ್ಲಿದ್ದರು.
ಇಂಗ್ಲೀಷ ವಿಷಯ ಶಿಕ್ಷಕ ಪಿ.ಎಸ್. ಪಾಟೀಲ ಹಾಗೂ ಹಿಂದಿ ವಿಷಯ ಶಿಕ್ಷಕಿ ಎಮ್.ಡಿ. ನಾರಾಯಣಕರ ವಿದ್ಯಾರ್ಥಿನಿಯರಿಗೆ ಇಂಗ್ಲೀಷ್ ಹಾಗೂ ಹಿಂದಿ ವಿಷಯಗಳ ಕುರಿತು ಪ್ರತಿಭೆಯನ್ನು ಪ್ರದರ್ಶಿಸಿಸಲು ಮಾರ್ಗದರ್ಶನ ನೀಡಿದರು.
ಶಾಲಾ ವಿದ್ಯಾರ್ಥಿನಿಯರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಾಲಾ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಶಾಲಾ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ಸೌಽಽ ಎ.ಜಿ.ಗಾಂಧಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಇಂಗ್ಲೀಷ್ ಹಾಗೂ ಹಿಂದಿ ವಿಷಯಗಳ ವಸ್ತು ಪ್ರದರ್ಶನ ಹಾಗೂ ಕಾರ್ಯಗಾರ ವನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ ಉದ್ಘಾಟಿಸಿದರು.