ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಶಿಕ್ಷಣ ಅಗತ್ಯ: ಲೋಕೇಶ್
Education is essential for women's economic self-reliance: Lokesh
ಲೋಕದರ್ಶನ ವರದಿ
ರಾಣೇಬೆನ್ನೂರು, ಆ.29: ಇಂದಿನ ದಿನಮಾನಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಉತ್ತಮ ಶಿಕ್ಷಣ ಅಗತ್ಯ ಎಂದು ರಾಣೇಬೆನ್ನೂರು ಡಿವೈಎಸ್ಪಿ ಜೆ. ಲೋಕೇಶ್ ಹೇಳಿದರು.
ಬಿ.ಜೆ.ಎಸ್ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಘಟಕದ ಯೂತ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಹಿಳೆಯರು ಮೊಬೈಲ್ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದರ ಜೊತೆಗೆ ಆರೋಗ್ಯದ ಬಗ್ಗೆಯೂ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ಕಾಲೇಜಿನ ಹಳೆಯ ವಿದ್ಯಾರ್ಥಿನಿ ಹಾಗೂ ಅಬಕಾರಿ ಇಲಾಖೆಯ ಸಬ್ಇನ್ಸ್ಪೆಕ್ಟರ್ ಅನುರಾಧಾ ಚೆನ್ನಬಸಪ್ಪ ಓಲೆಕಾರ್ ಮಾತನಾಡಿ, ವಿದ್ಯಾರ್ಥಿನಿಯಾಗಿದ್ದ ದಿನಗಳ ಅನುಭವಗಳನ್ನು ಹಂಚಿಕೊಂಡರು. ಮಹಿಳೆಯರ ಜೀವನದಲ್ಲಿ ಶಿಕ್ಷಣದ ಮಹತ್ವವನ್ನು ವಿವರಿಸಿದರು.
ಸಮಾರಂಭದಲ್ಲಿ ಡಾ. ಆರ್.ಎಂ. ಕುಬೇರ್ಪ, ಬಿ.ಎ.ಜೆ.ಎಸ್ಎಸ್ ರಾಷ್ಟ್ರೀಯ ಉಪಾಧ್ಯಕ್ಷರು, ಶಿಕ್ಷಕರು, ಪದವೀಧರ ರಾಜ್ಯ ಘಟಕದ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳಲ್ಲಿ ಪರಿಣತಿ ಗಳಿಸುವಂತೆ ಕರೆ ನೀಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ಬಣಕಾರ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಡಾ. ದೇವರಾಜ ಹಂಚಿನಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಜಿತಾ ಪಾಣಿಪಾತೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷಾ ಜಿ. ವಂದಿಸಿದರು. ಶಿವಾನಿ ಹಳಹಳ್ಳಿ ಹಾಗೂ ಚೈತ್ರಾ ಕಮಾಟಿ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಕ್ಯಾವಿ ಸಿದ್ದಮ್ಮನವರ ಹಾಗೂ ಮೇಘಾ ಹಣ್ಣಿಕೇರಿ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿಯರಿಂದ ಮನರಂಜನಾ ಕಾರ್ಯಕ್ರಮವೂ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 