ಪ್ರಾಥಮಿಕ ಹಂತದ ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಕಡಿಮೆ ಇರುತ್ತದೆ: ಶಾಸಕ ಬಯ್ಯಾಪೂರ ಕಳವಳ
ಕುಷ್ಟಗಿ: ಪ್ರಾಥಮಿಕ ಹಂತದ ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಕಡಿಮೆ ಇರುತ್ತದೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಕಳವಳ ವ್ಯಕ್ತಪಡಿಸಿದರು. ತಾಲೂಕು ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಶನಿವಾರ ಮಧ್ಯಾಹ್ನ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜ ಸಂಭಾಗಣದಲ್ಲಿ ಏರಿ್ಡಸಿದ್ದ ತಾಲೂಕು ಮಟ್ಟದ ಪ್ರೌಢ ಶಾಲಾ ಸಹ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರ ಹಾಗೂ ತಾಲೂಕ ಪ್ರೌಢಶಾಲಾ ಶಿಕ್ಷಕರಿಗೆ ಗೌರವ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ಶಿಕ್ಷಕರು ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸಹಕರಿಸಬೇಕು.
ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಕೊಪ್ಪಳ ಜಿಲ್ಲೆ 2 ಅಥವಾ 3 ನೇ ಸ್ಥಾನ ತಲುಪಲು ಪ್ರತಿಯೊಬ್ಬರೂ ಶ್ರಮವಹಿಸಿ ಕೆಲಸವನ್ನು ಮಾಡಬೇಕು.
ಸತ್ಯಚರಿತ್ರೆ ಕಾರ್ಯ ಕೆಲಸ ಮಾಡಿದರೆ ಒಂದು ಟನ್ ಉಪದೇಶಕ್ಕೆ ಸರಿ ಸಮ ನಾವೆಲ್ಲರೂ ಅರಿತು ನಡೆಯಬೇಕು ಎಂದು ಹೇಳಿದರು. ಶಿಕ್ಷಕರು ಅನೇಕ ಬೇಡಿಕೆಗಳನ್ನು ಇಟ್ಟಿದ್ದೀರಿ ಅವುಗಳನ್ನು ಸರಕಾರದ ಹಂತದಲ್ಲಿ ಈಡೇರಿಸುವ ಕೆಲಸ ಮಾಡುತ್ತೇನೆ. ಪ್ರೌಢಶಾಲಾ ಶಿಕ್ಷಕರ ಸಂಘಕ್ಕೆ ಕುಷ್ಟಗಿ ಪಟ್ಟಣದಲ್ಲಿ ನಿವೇಶನ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಭಾಯಿ ಪುಲೇ ಸೇರಿದಂತೆ ಇನ್ನೂ ಅನೇಕ ಮಹಾತ್ಮರ ತತ್ವ ಸಿದ್ದಾಂತ್ ಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ದಾರಿಯಲ್ಲಿ ಮುನ್ನಡೆಯಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ನೀಲನಗೌಡ ಹೊಸಗೌಡ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಗದಗನ ಕರ್ನಾಟಕ ರಾಜ್ಯ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯದ ಕುಲ ಸಚಿವ ಬಸವರಾಜ ಲಕ್ಕಣ್ಣವರ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುಮಾರ್ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಕ್ಷೇತ್ರ ಸಮನ್ವಯಧಿಕಾರಿ ಎಂ.ಜಗದೀಶಪ್ಪ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಜಾಕೀರ ಹುಸೇನ್, ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಹರ್ತಿ, ಪ್ರಧಾನ ಕಾರ್ಯದರ್ಶಿ ಮಾರ್ತಂಡಪ್ಪ ದೇಸಾಯಿ, ಉಪಾಧ್ಯಕ್ಷ ವಿಠಲ ಎಂ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ, ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಅಹಮದ್ ಹುಶೇನ್, ಕಾರ್ಯದರ್ಶಿ ವಿರುಪಾಕ್ಷಪ್ಪ ಅಂಗಡಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಎಂ ಗೊಣ್ಣಾಗರ, ಕಾರ್ಯದರ್ಶಿ ಯಮನಪ್ಪ ಚೂರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕುದರಿ, ಕಾರ್ಯದರ್ಶಿ ಹೈದರಲಿ ಜಾಲಿಹಾಳ, ಅನುದಾನಿತ ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ಜಿ ಕಡೇಮನಿ, ಪ್ರಭಾಕರ ಅವರಡ್ಡಿ, ಸಂತೋಷ ಸಿ.ಕೆ, ಜಗದೀಶ ಸೂಡಿ, ನಾಗರಾಜ ನಿಡಗುಂದಿ, ತಿಮಣ್ಣ ಕೊಟೂಮಚಗಿ, ಶರಣಪ್ಪ ವಡ್ಡರ್, ವ್ಹಿ.ವ್ಹಿ.ಕೊಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವೆಂಕನಗೌಡ ಎನ್ ಸ್ವಾಗತಿಸಿದರು.