ವಿದ್ಯೆ ವ್ಯಕ್ತಿತ್ವ ರೂಪಿಸುವ ಸಾಧನವಾಗಬೇಕು: ಲೀಲಾವತಿ ಆರ್. ಪ್ರಸಾದ
Education should be a tool for shaping personality: Lilavati R. Prasad
ಧಾರವಾಡ 27: ವಿದ್ಯೆ ವ್ಯಕ್ತಿತ್ವ ರೂಪಿಸುವ ಸಾಧನವಾಗಬೇಕು. ಸ್ವಾವಲಂಬಿ ಬದುಕಿಗೆ ದಾರಿಯಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವೆ ಲೀಲಾವತಿ ಆರ್. ಪ್ರಸಾದ ಅಭಿಪ್ರಾಯಪಟ್ಟರು.
ಕರ್ನಾಟಕ ವಿದ್ಯಾವರ್ಧಕ ಸಂಘವು, ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ ದತ್ತಿ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ‘ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ-2025’ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.
ಇಂದಿನ ಸಂಧಿಗ್ದ ಪರಿಸ್ಥಿತಿಯಲ್ಲಿ ಮಹಿಳೆಯರಿಗೆ ಶಿಕ್ಷಣದ ಜೊತೆಗೆ ಉದ್ಯೋಗ ಸೃಷ್ಟಿಯಾಗಬೇಕು. ದಿನ ಬೆಳಗಾದರೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ಇಲ್ಲದಾಗಿದೆ. ಇದು ನಾಗರಿಕ ಸಮಾಜಕ್ಕೊಂದು ಕಪ್ಪು ಚುಕ್ಕೆ. ಇಂದು ಪುರುಷರು ಸಹ ಈ ಸಮಸ್ಯ ಕುರಿತು ಚಿಂತಿಸಬೇಕಿದೆ ಎಂದು ಹೇಳಿದರು.
ಹುಬ್ಬಳ್ಳಿಯ ಸಾಹಿತಿ ಸುನಂದಾ ಕಡಮೆ ಅಭಿನಂದನಾ ಪರ ಮಾತನಾಡಿ, ಹಾಸನದ ಸಾಹಿತಿ ರೂಪ ಹಾಸನ ‘ಪ್ರೇರಣಾ ವಿಕಾಸ ವೇದಿಕೆ’ಯ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ಕ್ರೌರ್ಯ ಅತ್ಯಾಚಾರ, ಅನಾಚರ ಹಾಗೂ ಸಾಮಾಜಿಕ ಅನಿಷ್ಠ ಪದ್ಧತಿಗಳ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ತಮಗೆ ಸಂದ ಪ್ರಶಸ್ತಿ ಮೊತ್ತವನ್ನೇ ವಿನಿಯೋಗಿಸುತ್ತಿದ್ದಾರೆ. ಇವರು ಸಾಹಿತ್ಯದಲ್ಲಿ ಟಾಲಸ್ಟಾಯರ ಪ್ರಭಾವವಿದೆ. ಎಸ್. ಅರ್. ಹಿರೇಮಠ ಕುರಿತು ಮಹಾಸಂಗ್ರಾಮಿ ಕೃತಿಯನ್ನು ಬರೆದಿದ್ದಾರೆ ಎಂದು ಹೇಳಿದರು.
ಪ್ರಶಸ್ತಿ ಪುರಸ್ಕೃತೆ ರೂಪ ಹಾಸನ್ ಮಾತನಾಡಿ, ನನಗೆ ಸಂದ ಈ ಪ್ರಶಸ್ತಿ ಮೊತ್ತವನ್ನು ಸಮಾಜದಲ್ಲಿ ನೊಂದವರ ವಿದ್ಯಾಭ್ಯಾಸಕ್ಕಾಗಿ ಖರ್ಚು ಮಾಡಲಾಗುತ್ತಿದೆ. ಇಂದು ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊಲೆಗಡುಕರ ಸಮಾಜ ಸೃಷ್ಟಿಸುತ್ತಿದ್ದೆನೆಯೋ ಎಂಬ ಭಾವನೆ ಉಂಟಾಗುತ್ತಿದೆ. ಇಂತಹ ಅತ್ಯಾಚಾರ ನೋಡಿ, ಕೇಳಿ ಸುಮ್ಮನಿಸುರುತ್ತಿರುವುದು ಒಂದು ದುರಂತ. ಈ ಪ್ರಶಸ್ತಿಯು ನನ್ನನು ಇನ್ನಷ್ಟು ರಚನಾತ್ಮಕ ಕಾರ್ಯ ಮಾಡಲು ಜವಾಬ್ದಾರಿ ನೀಡಿದೆ ಎಂದರು.
ಕ.ವಿ.ವ. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾರಂಭದಲ್ಲಿ ಡಾ.ಎಸ್.ಎಲ್. ಭೈರ್ಪನವರ ನಿಧನಕ್ಕೆ ಒಂದು ನಿಮಿಷ ಮೌನ ಆಚರಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಶಂಕರ ಕುಂಬಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ವಿಶ್ವೇಶ್ವರಿ ಬ. ಹಿರೇಮಠ ನಿರೂಪಿಸಿದರು. ವೀರಣ್ಣ ಒಡ್ಡೀನ ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ಸಂಜೀವ ಕುಲಕರ್ಣಿ, ಸತೀಶ ತುರಮರಿ, ಡಾ. ವೀಣಾ ಶಾಂತೇಶ್ವರ, ಎಸ್.ಆರ್. ಹಿರೇಮಠ, ಪಾರ್ವತಿ ಹಾಲಭಾವಿ, ಪ್ರಕಾಶ ಕಡಮೆ ಸೇರಿದಂತೆ ಮುಂತಾದವರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 