ಶಿಕ್ಷಣ ಸಂಸ್ಥೆಗಳು ಸಮಾಜದ ಬದಲಾವಣೆಗೆ ಪೂರಕವಾಗಬೇಕು: ಪದ್ಮಶ್ರೀ ಡಾ. ಪ್ರಭಾಕರ ಕೋರೆ
Educational institutions should foster societal change: Padma Shri Dr. Prabhakar Kore
ಲೋಕದರ್ಶನ ವರದಿ
ಮಾಂಜಿರಿ ಆ.25: ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯೋತ್ತರ ಅವಧಿಯಲ್ಲಿ ಸಾಮಾಜಿಕ ಪ್ರಜ್ಞೆಯುಳ್ಳ ಜನರು ಸಮಾಜದಲ್ಲಿರುವ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಲು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುತ್ತಿದ್ದರು. ಸರ್ಕಾರವು ಪ್ರಾಥಮಿಕ ಶಿಕ್ಷಣಕ್ಕೆ ಮಾತ್ರ ಹೆಚ್ಚಿನ ಒತ್ತು ನೀಡುತ್ತಿದ್ದ ಕಾಲಘಟ್ಟದಲ್ಲಿ ಶಿಕ್ಷಣದ ಅಗತ್ಯವನ್ನು ಮನಗಂಡು ಹಲವು ಸಂಸ್ಥೆಗಳು ಶೈಕ್ಷಣಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿವೆ ಎಂದು ಪದ್ಮಶ್ರೀ ಡಾ. ಪ್ರಭಾಕರ ಕೋರೆ ಹೇಳಿದರು.
ನೆರೆಯ ಮಹಾರಾಷ್ಟ್ರದ ಗಡಹಿಂಗ್ಲಜ್ ಪಟ್ಟಣದಲ್ಲಿರುವ ವಿದ್ಯಾ ಪ್ರಸಾರಕ ಮಂಡಳಿಯ ವತಿಯಿಂದ ನಡೆದ ಡಾ. ಘಾಳಿ ಸಮಾಜಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಡಾ. ಸತೀಶ್ ಘಾಳಿ ವಹಿಸಿದ್ದರು.
ಜಂಟಿ ಕಾರ್ಯದರ್ಶಿ ಗಜೇಂದ್ರ ಬಂಡಿ ಅವರು ಸ್ವಾಗತಿಸಿ ಪರಿಚಯಿಸಿದರು.
ಪದ್ಮಶ್ರೀ ಡಾ. ಪ್ರಭಾಕರ ಕೋರೆ ಮಾತನಾಡಿ, 1916ರಲ್ಲಿ ಏಳು ಜನರು ಕೆಎಲ್‌ಇ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದರು. ಇಂದು ಸಂಸ್ಥೆಯು 322 ಶಾಖೆಗಳನ್ನು ಹೊಂದಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದೆ ಎಂದರು.
ಬ್ರಿಟಿಷರ ಕಾಲದಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವುದು ಸುಲಭವಾಗಿರಲಿಲ್ಲ. ಬಡವರು ಹಾಗೂ ಕಾರ್ಮಿಕ ವರ್ಗದ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶಗಳು ವಿರಳವಾಗಿದ್ದವು. ಈ ಹಿನ್ನೆಲೆಯಲ್ಲಿ ಕೆಎಲ್‌ಇ ಸಂಸ್ಥೆಯ ಸ್ಥಾಪಕರು ಶಿಕ್ಷಣದ ಬಾಗಿಲು ಎಲ್ಲರಿಗೂ ತೆರೆಯಬೇಕು ಎಂಬ ಉದ್ದೇಶದಿಂದ ಸಂಸ್ಥೆಯನ್ನು ಆರಂಭಿಸಿದರು ಎಂದು ಅವರು ಹೇಳಿದರು.
ಬೆಳಗಾವಿಯಲ್ಲಿ ವೈದ್ಯರು ಹಾಗೂ ಎಂಜಿನಿಯರ್ಗಳ ಕೊರತೆಯಿದ್ದ ಕಾಲವೊಂದಿತ್ತು. ಆದರೆ ಇಂದು ಬೆಳಗಾವಿ ನಗರವು ಸಾವಿರಾರು ವೈದ್ಯರು ಹಾಗೂ ಎಂಜಿನಿಯರ್ಗಳನ್ನು ರೂಪಿಸುವ ಶೈಕ್ಷಣಿಕ ಕೇಂದ್ರವಾಗಿ ಬೆಳೆದಿದೆ. ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆತಿರುವುದು ತಮ್ಮ ಪಾಲಿನ ಸೌಭಾಗ್ಯ ಎಂದು ಡಾ. ಪ್ರಭಾಕರ ಕೋರೆ ಹೇಳಿದರು.
ಕೆಎಲ್‌ಇ ಸಂಸ್ಥೆಯ ಮೂಲಕ ಸಮಾಜ ನಿರ್ಮಾಣದಲ್ಲಿ ತೃಪ್ತಿ ದೊರೆತಿದೆ. ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರಶಸ್ತಿಯೊಂದಿಗೆ ತಮಗೆ ನೀಡಲಾಗಿದ್ದ ?25 ಸಾವಿರ ನಗದು ಮೊತ್ತವನ್ನು ಡಾ. ಪ್ರಭಾಕರ ಕೋರೆ ವಿದ್ಯಾ ಪ್ರಸಾರಕ ಮಂಡಳಿಗೆ ಹಿಂದಿರುಗಿಸುವ ಮೂಲಕ ತಮ್ಮ ಸಾಧನೆ ಹಾಗೂ ಓದಾರ್ಯವನ್ನು ಮೆರೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 