ಅಕ್ಷರ ದಾಸೋಹ ಯೋಜನೆ ಪರಿಣಾಮಕಾರಿ ಅನುಷ್ಠಾನ: ಉಪ್ಪಾರ
ಮೂಡಲಗಿ 1: ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ನಮ್ಮ ಶಿಕ್ಷಣ ಇಲಾಖೆ ಶೈಕ್ಷಣಿಕವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವದರಲ್ಲಿ ಅಕ್ಷರ ದಾಸೋಹ ಯೋಜನೆ ಕೂಡಾ ಒಂದು ಎಂದು ಕಲ್ಲೋಳಿ ಸಮೂಹ ಸಂಪನ್ಮೂಲ ವ್ಯಕಿಗಳಾದ ಜಿ.ಕೆ.ಉಪ್ಪಾರ ಹೇಳಿದರು.
ಅವರು ತುಕ್ಕಾನಟ್ಟಿಯ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ವಿತರಿಸಿ ಮಾತನಾಡುತ್ತಿದ್ದರು.
ಈ ಯೋಜನೆ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಒಂದು ವರದಾನವಾಗಿದೆ. ಇದು ನಮ್ಮ ಮೂಡಲಗಿ ವಲಯದ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಅಕ್ಷರ ದಾಸೋಹ ಯಶಸ್ವಿಯಾಗಿ ಅನುಷ್ಠಾನಗೊಂಡು ರಾಜ್ಯಮಟ್ಟದಲ್ಲಿ ಮಾದÀರಿಯಾಗಿರುವದು ಹೆಮ್ಮೆಯ ವಿಷಯ ಎಂದು ಹೇಳಿದರು.
ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಮಾತನಾಡಿ ಮಧಾಹ್ನ ಉಪಹಾರ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕೋವಿಡ-19 ಹಿನ್ನೆಲೆಯಲ್ಲಿ ಬಿಸಿಯೂಟದ ಬದಲಾಗಿ ಆಹಾರ ಭದ್ರತಾ ಭತ್ಯೆಯಂತೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು. ನಮ್ಮ ಶಾಲೆಯ ಅಕ್ಷರ ದಾಸೋಹ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿರುವದಕ್ಕೆ ಸ್ಥಳೀಯ ಶಾಸಕರ ಇಲಾಖೆ ಅಧಿಕಾರಿಗಳ ಗ್ರಾಮಸ್ಥರ ಸಹಕಾರವೇ ಕಾರಣ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ 132 ದಿನಗಳಿಗೆ ಆಹಾರ ದಾನ್ಯ ವಿತರಿಸಲಾಯಿತು.
ಕಲ್ಲೋಳಿ ಸಮೂಹ ಸಂಪನ್ಮೂಲ ವ್ಯಕಿಗಳಾದ ಜಿ.ಕೆ.ಉಪ್ಪಾರ, ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ, ಶಿಕ್ಷಕರಾದ ಪುಷ್ಪಾ ಭರಮದೆ, ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ, ಎಸ್.ಡಿ.ಲಮಾಣಿ, ಎಸ.ಆರ್.ಕುಲಕರ್ಣಿ, ಸಂಗೀತಾ ತಳವಾರ, ಎಮ್.ಕೆ.ಕಮ್ಮಾರ, ಎಮ್.ಡಿ, ಗೋಮಾಡಿ ಹಾಗೂ ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.