ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Efforts for the prosperity of all communities said Minister Lakshmi Hebbalkar
ಕುಮಾರಸ್ವಾಮಿ ಲೇಓಟ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಬೆಳಗಾವಿ 25: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ದಿನಗಳು ಬಂದಿವೆ. ಕ್ಷೇತ್ರದ ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮಿಸುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕುಮಾರಸ್ವಾಮಿ ಲೇಓಟ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಸುಮಾರು 2 ಕೋಟಿ ರೂಪಾಯಿಗಳ ವೆಚ್ಚದ ರಸ್ತೆ ನಿರ್ಮಾಣ, ಫೇವರ್ಸ್ ಅಳವಡಿಕೆ, ಚರಂಡಿ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಕ್ಷೇತ್ರದಲ್ಲಿರುವ ಪ್ರತಿಯೊಂದು ಸಮಾಜ, ಪ್ರತಿಯೊಬ್ಬ ನಾಗರಿಕರು ಜೊತೆಯಾಗಿ ಮುಂದೆ ಸಾಗಬೇಕು. ಎಲ್ಲ ಸಮುದಾಯದವರು ಬೆಳೆಯಬೇಕು. ಕುಮಾರಸ್ವಾಮಿ ಬಡಾವಣೆ ಮಾದರಿ ಬಡಾವಣೆಯಾಗಿ ಅಭಿವೃದ್ಧಿಯಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಭಾರತ ದೇಶದಲ್ಲಿ ನಾವೆಲ್ಲ ವಿವಿಧ ಸಂಸ್ಕೃತಿಯಿಂದ ಬೆಳೆದಿದ್ದೇವೆ. ಹಿರಿಯರಿಗೆ ಗೌರವ ಕೊಡುವ ಪದ್ದತಿಯನ್ನು ಹೊಂದಿದ್ದೇವೆ. ನಾವೆಲ್ಲರೂ ಪ್ರಗತಿಪರ ಚಿಂತನೆಯಲ್ಲಿ ಬೆಳೆದಿದ್ದೇವೆ. ಜನರ ಪ್ರತಿನಿಧಿಯಾಗಿ ಕ್ಷೇತ್ರವನ್ನು ಸುಧಾರಣೆ ಮಾಡುವುದೇ ನನ್ನ ಕನಸಾಗಿದೆ ಎಂದು ಹೇಳಿದರು.
ಈ ವೇಳೆ ಕುಮಾರಸ್ವಾಮಿ ಲೇಓಟ್ ನ ಮುಖಂಡರು, ನಿವಾಸಿಗಳು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 