ಇಂಡಿ

ಉರ್ದು ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ

ಉರ್ದು ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ


ಲೋಕದರ್ಶನ ವರದಿ 

ಇಂಡಿ 01: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಒಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳಿಗೆ 12 ಮೊಟ್ಟೆ, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಮೊಟ್ಟೆಯ ಬದಲಿಗೆ ಬಾಳೆಹಣ್ಣನ್ನು ವಿತರಿಸಲಾಗುತ್ತದೆ ಎಂದು ಬಿಆರ್‌ಪಿ ಅಧಿಕಾರಿಗಳಾದ ಆಯ್ ಜಿ ಆಳೂರ ಹೇಳಿದರು.        


ಅವರು ಇಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆಗೆ ಚಾಲನೆ ನೀಡಿ ಮಾತನಾಡಿದರು. 06 ರಿಂದ 15 ನೇ ವಯೋಮಾನದವರೆಗಿನ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ ಹಾಗೂ ಬಹು ಪೋಷಕಾಂಶಗಳ ನ್ಯೂನತೆ ಅಧಿಕವಾಗಿರುವುದು ಅಧ್ಯಯನದಲ್ಲಿ ಕಂಡುಬಂದಿದ್ದು, ಇದರ ನಿವಾರಣೆಗಾಗಿ 2021-22ನೇ ಸಾಲಿನಲ್ಲಿ ರಾಜ್ಯದ ಮಧ್ಯಾಹ್ನ ಉಪಹಾರ ಯೋಜನೆಯಡಿ ಈ ಕಾರ್ಯ ಜರುಗುತ್ತಿದೆ ಎಂದು ಹೇಳಿದರು.    


 ಅಧ್ಯಕ್ಷತೆ ವಹಿಸಿದ ಶಾಲಾ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ ಮಾತನಾಡಿ,ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಬಹುಪೋಷಕಾಂಶಗಳ ನ್ಯೂನತೆ ಕೊರತೆ ಇರುವುದು ಕಂಡುಬಂದಿದೆ. ಈ ಕಾರಣದಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಒಂದು ತಿಂಗಳಲ್ಲಿ 12 ಬೇಯಿಸಿದ ಮೊಟ್ಟೆ ಕೊಡುವ ಮೂಲಕ ಅವರಲ್ಲಿ ಪೌಷ್ಟಿಕತೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.        


ಸಿ ಆರ್ ಪಿ ಸಂತೋಷ ಚವ್ಹಾಣ ಮಾತನಾಡಿ,ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ವಾರದಲ್ಲಿ ಎರಡು ಬಾರಿ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಕೊಡಲಾಗುವುದು ಎಂದು ಹೇಳಿದರು.       

ಶಿಕ್ಷಕರಾದ ಎಸ್ ಎಸ್ ಅರಬ, ಸಂತೋಷ ಬಂಡೆ,ಎನ್ ಬಿ ಚೌಧರಿ,ಎಸ್ ಪಿ ಪೂಜಾರಿ ಸೇರಿದಂತೆ ಪಾಲಕರು ಉಪಸ್ಥಿತರಿದ್ದರು. 


ಸುದ್ದಿ ಓದಿ