ಯರಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ
ಯರಗಟ್ಟಿ,26 : ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಜೀಂ ಪ್ರೇಮ್ ಜಿ ಫೌಂಡೆಶನ್ ವತಿಯಿಂದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ತತ್ತಿ ಶೆಂಗಾ ಚಕ್ಕೆ ಬಾಳೆಹಣ್ಣು ವಿತರಣೆ ಮಾಡಲಾಯಿತು.
ಈ ವೇಳೆ ಎಸ್.ಡಿ.ಎಂ.ಸಿ ಅಧ್ಯಕ್ಷ ರಫೀಕ ಡಿ ಕೆ ಮಕ್ಕಳ ಜೊತೆ ಊಟ ಮಾಡಿ ಆಹಾರದ ಗುಣಮಟ್ಟ ಪರೀಕ್ಷಿಸಿ ಅಡುಗೆ ಮಾಡುವವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರತಿ ದಿನ ಒಳ್ಳೆಯ ಗುಣಮಟ್ಟದ ಆಹಾರ ನೀಡಿ ಎಂದು ಸೂಚನೆ ನೀಡಿದರು.
ಈ ವೇಳೆ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಯಕ್ಕೇರೆಪ್ಪ ತಳವಾರ, ಮುಖ್ಯೋಪಾಧ್ಯಾಯ ಪಿ. ಎಂ. ತಳವಾರ ಸೇರಿದಂತೆ ಶಾಲಾ ಗುರುಗಳು, ಗುರುಮಾತೆಯರು ಇದ್ದರು.