ರಾಷ್ಟ್ರೀಯ

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು

ಕೌಶಂಬಿ, ಡಿಸೆಂಬರ್ 2: ಇಲ್ಲಿನ ಕರಹಾದಮ್ ಪೊಲೀಸ್ ಠಾಣೆ ವ್ಯಾಪ್ತಿಯ ದೇವ್‌ಗಂಜ್ ಕ್ರಾಸಿಂಗ್ ಬಳಿ ಬುಧವಾರ ಬೆಳಿಗ್ಗೆ ಎಸ್‌ಯುವಿ ವಾಹನ ಮೇಲೆ ಮೇಲೆ ಜಲ್ಲಿ ತುಂಬಿದ್ದ ಟ್ರಕ್ ಬಿದ್ದು ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ.

ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಎಸ್‍ಯುವಿ ವಾಹನದಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು.

ರಕ್ಷಣಾ ಕಾರ್ಯವನ್ನು ಪರಿಶೀಲಿಸಲು ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಅಮಿತ್ ಸಿಂಗ್ 8 ಮಂದಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದಾರೆ. 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರವಾಗಿ ಗಾಯಗೊಂಡ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಟೈರ್ ಸ್ಫೋಟದ ನಂತರ ಟ್ರಕ್ ಪಲ್ಟಿಯಾಗಿ ಎಸ್‍ ಯುವಿ ವಾಹನದ ಮೇಲೆ ಬಿದ್ದು ಈ ಅಪಘಾತ ಸಂಭವಿಸಿದೆ.

ಎಸ್‍ ಯುವಿ ವಾಹನ ಸಿರಾತು ಪ್ರದೇಶದ ಲೆಖ್‌ಪಾಲ್ ಕುಟುಂಬದ ವಿವಾಹ ಕಾರ್ಯಕ್ರಮಕ್ಕಾಗಿ  ಕೊಖರಾಜ್ ಪ್ರದೇಶಕ್ಕೆ ತೆರಳಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಕುಟುಂಬ ಸದಸ್ಯರಿಗೆ ಸರ್ಕಾರದ ಮಾನದಂಡದಂತೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಅಫಘಾತದಲ್ಲಿ ಮೃತಪಟ್ವವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಸುದ್ದಿ ಓದಿ