ಬಳ್ಳಾರಿ

ಕೃಷಿ ಪರಿಕರ ಮಾರಾಟಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ

ಕೃಷಿ ಪರಿಕರ ಮಾರಾಟಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ

ಲೋಕದರ್ಶನ ವರದಿ

ಬಳ್ಳಾರಿ 26: ಕರ್ನಾಟಕ ರಾಜ್ಯ ಮಟ್ಟದ ಕೃಷಿ ಪರಿಕರ ಮಾರಾಟಗಾರರ ಸಂಘದ ಉಪಾಧ್ಯಕ್ಷರನ್ನಾಗಿ ಗಣಪಾಲ್ ಐನಾಥರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು.

ದಿ.25ರಂದು ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ ಪರಿಕರ ಮಾರಾಟಗಾರರ ಪ್ರತಿನಿಧಿಗಳ ನಡೆದ ಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. 

ಬಳ್ಳಾರಿಯಲ್ಲಿ ಮಾಡಿದ ಸೇವೆಗಳನ್ನು ಗುರುತಿಸಿ ಹಲವಾರು ಸಮಸ್ಯೆಗಳನ್ನು ಈಡೇರಿಸುವ ಮೂಲಕ ನಮ್ಮನ್ನು ಗುರುತಿಸಿ ಕರ್ನಾಟಕ ರಾಜ್ಯ ಮಟ್ಟದ ಕೃಷಿ ಪರಿಕರ ಮಾರಾಟಗಾರರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಮಾಡಿ ಕೃಷಿಪರಿಕರ ಮಾರಾಟಗಾರರ ಸಮಸ್ಯೆಗಳನ್ನು ಅರಿತು ಪರಿಹರಿಸಲು ನಾನು ಪ್ರಯತ್ನಿಸುತ್ತೇನೆ. ರಾಷ್ಟ್ರ ಮಟ್ಟದಲ್ಲಿರುವ ಕೃಷಿ ಪರಿಕರ ಮಾರಾಟಗಾರರ ಸಂಘದ ಜೊತೆಗೂಡಿ ಇನ್ನೂ ಹಲವಾರು ಕೆಲಸಗಳನ್ನು ಮಾಡಲು ಇಚ್ಚಿಸುತ್ತೇನೆ ಎಂದು ಗಣಪಾಲ್ ಐನಾಥರೆಡ್ಡಿ ತಿಳಿಸಿದ್ದಾರೆ.

ಸುದ್ದಿ ಓದಿ