ಅಧ್ಯಕ್ಷರಾಗಿ ದೇವಪ್ಪ ಮೋರನಾಳ ಆಯ್ಕೆ
ಲೋಕದರ್ಶನ ವರದಿ
ಮುಂಡರಗಿ 23: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಮುಂಡರಗಿ ಪಟ್ಟಣದ ದೇವಪ್ಪ ದುರಗಪ್ಪ ಮೋರನಾಳ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೂಚಿಸುವದರೊಂದಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.