ಅವಿರೋಧವಾಗಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಹಾವೇರಿ : ಅಖಂಡ ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಕೆಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಕುಮಾರಗೌಡ ಪಾಟೀಲ ಅಧ್ಯಕ್ಷರಾಗಿ ಹಾಗೂ ಬಿಜೆಪಿಯ ನಿಂಗನಗೌಡ ಮರಿಗೌಡ್ರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ಶುಭ ಕೋರಲಾಯಿತು.
ಕೆಸಿಸಿ ಬ್ಯಾಂಕ್ನ ಈ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಒಗ್ಗಟ್ಟನ್ನು ಪ್ರದರ್ಶಿಸಿ ಗೆಲುವು ಸಾಧಿಸಿದ್ದು,ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದ್ದು,ಅಖಂಡ ಧಾರವಾಡ ಜಿಲ್ಲೆಯಲ್ಲಿ ಪ್ರಭಾವಿ ಸಚಿವರು ಹಾಗೂ ಶಾಸಕರು ಇದ್ದರೂ ಕೂಡಾ ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ.ನಿಮ್ಮ ದುರಾಡಳಿತ,ಭ್ರಷ್ಟಾಚಾರದಿಂದ ಜನರು ರೋಷಿಹೊಗಿದ್ದಾರೆ.ಜನಾಭಿಪ್ರಾಯಕ್ಕೆ ತಲೆ ಬಾಗಲೇಬೇಕು ಎಂದು ಬಿಜೆಪಿ ಮುಖಂಡರು ಹೇಳಿದರು.
ಶಾಸಕರುಗಳಾದ ಸಿ ಸಿ ಪಾಟೀಲ,ಎಂ ಆರ್ ಪಾಟೀಲ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನರ, ಸೀಮಾ ಮಸೂತಿ, ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ,ಜಿಲ್ಲಾ ಪ್ರಧಾನ ಕಾರ್ಯದಶರ್ಿ ಶಶಿಧರ ಹೊಸಳ್ಳಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕೆಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು