ಕಾರವಾರ

ರೈತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ರೈತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಮುಂಡಗೋಡ 23: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಮಟ್ಟದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಪಟ್ಟಣದಲ್ಲಿ ಶುಕ್ರವಾರ ನಡೆಯಿತು.  ರಾಜ್ಯಾಧ್ಯಕ್ಷ ವಾಸುದೇವ್ ಮೇಟಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಬಸವರಾಜ್ ವಾಲ್ಮೀಕಿ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಮಂಜುಳಾ ಕೀರ್ತಿ ಆಯ್ಕೆಯಾದರು. ತಾಲ್ಲೂಕುಗಳಿಂದ ಆಗಮಿಸಿದ್ದ ರೈತ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. 


ಸುದ್ದಿ ಓದಿ