ರಾಣೆಬೆನ್ನೂರ

ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಹೊಸ ಅಧ್ಯಕ್ಷರ ಆಯ್ಕೆ

ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಹೊಸ ಅಧ್ಯಕ್ಷರ ಆಯ್ಕೆ

ರಾಣೇಬೆನ್ನೂರು 09: ತಾಲೂಕಿನ ಇಟಗಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನದ ಅವಧಿ ಮುಗಿದು ಕೆಲವು ತಿಂಗಳು ಗತಿಸಿದರೊ ಸಹ . ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರಕ್ಕೆ, ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳಿಗೆ ಸರಿಯಾಗಿ ಮಾಹಿತಿ ನೀಡದೇ ಹಾಲಿ ಸದಸ್ಯರ ಜೊತೆಗೆ ಕೈಜೋಡಿಸಿ ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡದೆ ಸುಮ್ಮನೆ ಇರುವುದು ಕೆಲ ಸದಸ್ಯರಿಗೆ ಬೇಸರ ತರಿಸಿದೆ. ಹೊಸ ಅಧ್ಯಕ್ಷರ ಆಯ್ಕೆಯನ್ನು ಮಾಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಾವಿತ್ರಮ್ಮ ಜಿ.ಎಸ್‌. ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯೆ ನೀಲಮ್ಮ ಸಿದ್ದಪ್ಪನವರ, ಅವರು ಕೂಡಲೇ ಕ್ರಮ  ಕೈಗೊಳ್ಳುವಂತೆ  ಮನವಿ ಸಲ್ಲಿಸಿದರು. 

ನಂತರ ಮಾತನಾಡಿದ ಅವರು ನಮ್ಮ ಗ್ರಾಮ ಪಂಚಾಯಿತಿಯಲ್ಲಿ 21 ಸದಸ್ಯರು ನಮ್ಮ ಪತ್ರಕ್ಕೆ 20 ಸದಸ್ಯರು ಸಹಿ ಮಾಡಿ ಸರ್ಕಾರಕ್ಕೆ ಗ್ರಾಮ ಪಂಚಾಯಿತಿಯ ಹೊಸ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಕಳಿಸಿಕೊಟ್ಟಿದ್ದೇವೆ. ಕೂಡಲೇ ನಮ್ಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ಕಾರ್ಯ ಮುಖವಾಗಿ ಕೆಲಸ ಮಾಡಬೇಕು. ಶೀಘ್ರದಲ್ಲಿಯೇ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಅನುವು ಮಾಡಿಕೊಡಬೇಕೆಂದು ಈಗಾಗಲೇ ಮನವಿ ಮಾಡಿದ್ದೇವೆ ಎಂದರು 


ಸುದ್ದಿ ಓದಿ