ಪ್ರೌಢ ಶಾಲಾ ಸಹ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಲೋಕದರ್ಶನ ವರದಿ
ಹಗರಿಬೊಮ್ಮನಹಳ್ಳಿ 08: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ರವಿಚಂದ್ರನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುರೇಶ್, ಕಾರ್ಯದರ್ಶಿಯಾಗಿ ಶಿವತನಯ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಜಯಶ್ರೀ, ಖಜಾಂಚಿಯಾಗಿ ಪ್ರಕಾಶ್ ಸಕ್ರೆಗೌಡ, ರಾಜ್ಯ ಪರಿಷತ್ ಸದಸ್ಯರಾಗಿ ಸಿದ್ದಲಿಂಗಯ್ಯ ಇವರನ್ನು ಆಯ್ಕೆಮಾಡಲಾಯಿತು ಎಂದು ಸಹ ಚುನಾವಣಾಧಿಕಾರಿ ಕೊಟ್ರದೇವರು ಹೇಳಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿಚಂದ್ರನಾಯ್ಕ ಮಾತನಾಡಿ ತಾಲೂಕಿನ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ, ಕ್ಷೇತ್ರ ಸಮನ್ವಯಾಧಿಕಾರಿಗಳಿಗೂ ಹಾಗೂ ಸಹಾಯಕ ಚುನಾವಣಾಧಿಕಾರಿಯಾದ ಕೊಟ್ರದೇವರವರಿಗೂ ವೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಕುಂದು ಕೊರತೆಗಳ ಬಗ್ಗೆ ಹೋರಾಟ ಮಾಡುತ್ತಾ ಅವರಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನತ್ತ ಕಾಯಾ, ವಾಚಾ, ಮನಸ್ಸಾ ಶ್ರಮಿಸುತ್ತೇನೆ ಎಂದರು.