ಡಿಸಿಸಿ ಬ್ಯಾಂಕ್ ಹೆಚ್ಚು ಗಟ್ಟಿಯಾಗಿ ಕಟ್ಟಲು ಚುನಾವಣೆ: ಶಾಸಕ ಜಾರಕಿಹೊಳಿ
Elections to build DCC Bank stronger: MLA Jarkiholi
ಡಿಸಿಸಿ ಬ್ಯಾಂಕ್ ಹೆಚ್ಚು ಗಟ್ಟಿಯಾಗಿ ಕಟ್ಟಲು ಚುನಾವಣೆ: ಶಾಸಕ ಜಾರಕಿಹೊಳಿ
ರಾಯಬಾಗ 05: ಸಹಕಾರ ಚುನಾವಣೆಯಲ್ಲಿ ಪಕ್ಷಾತೀತ, ಜ್ಯಾತ್ಯಾತೀತವಾಗಿ ರೈತರ ಅನುಕೂಲಕ್ಕಾಗಿ ಎಲ್ಲರೂ ಒಟ್ಟುಗೂಡಿಕೊಂಡು ಡಿಸಿಸಿ ಬ್ಯಾಂಕ್ ಚುನಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮಂಗಳವಾರ ಪಟ್ಟಣದ ಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮತ್ತು ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುರಗೋಡ ಮಹಾಂತ ಅಜ್ಜನವರ ಆಶೀರ್ವಾದದಿಂದ ಪ್ರಾರಂಭಗೊಂಡ ಬ್ಯಾಂಕ್ ಇಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಅದನ್ನು ಇನ್ನು ಹೆಚ್ಚು ಗಟ್ಟಿಯಾಗಿ ಕಟ್ಟಲು ಬ್ಯಾಂಕ್‌ನ ಎಲ್ಲ 15 ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಾಗಿದೆ. ಬ್ಯಾಂಕ್‌ನಿಂದ ರೈತರಿಗೆ ಇನ್ನು ಹೆಚ್ಚಿನ ಸಾಲಸೌಲಭ್ಯ ನೀಡುವಂತೆ, ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು. ಬ್ಯಾಂಕ್ ಕೇವಲ ಅಧ್ಯಕ್ಷರ ಮಾತು ನಡೆಯದೇ, ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರ ಮಾತು ನಡೆಯುವಂತೆ ಇರಬೇಕು. ಬ್ಯಾಂಕ್ ಗಟ್ಟಿಯಾದರೆ ರೈತರಿಗೆ ಅನುಕೂಲವಾಗುತ್ತದೆ. 3400 ಕೋಟಿ ರೂ. ಸಾಲವನ್ನು ರೈತರಿಗೆ ನೀಡಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮೊತ್ತದ ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡಲಾಗುವುದು ಎಂದು ತಿಳಿಸಿದರು. ಅಧ್ಯಕ್ಷರಾಗಿ ಅತ್ಯಂತ ಯಶಸ್ವಿಯಾಗಿ ಡಿಸಿಸಿ ಬ್ಯಾಂಕ್ ಮುನ್ನಡೆಸುತ್ತಿರುವ ರಾಯಬಾಗದ ಅಪ್ಪಾಸಾಹೇಬ ಕುಲಗುಡೆಯವರನ್ನು ಮತ್ತೊಂದು ಬಾರಿ ಅವಿರೋಧವಾಗಿ ಆಯ್ಕೆಮಾಡಬೇಕೆಂದು ಕರೆ ನೀಡಿದರು.
ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ನ್ನು ಬಲಿಷ್ಠವಾಗಿ ಕಟ್ಟಲು ಪೆನಲ್‌ನ ಎಲ್ಲ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆಮಾಡಬೇಕು. ಈ ಮೊದಲು ಇದ್ದವರು ತಾವು ಇಲ್ಲದೇ ಡಿಸಿಸಿ ಬ್ಯಾಂಕ್ ನಡೆಯುವುದಿಲ್ಲವೆಂದು ತಿಳಿದಿದ್ದರು. ಆದರೆ ಅಪ್ಪಾಸಾಹೇಬ ಕುಲಗುಡೆ ಅವರ ಅಧ್ಯಕ್ಷತೆಯಲ್ಲಿ ಬ್ಯಾಂಕ್ 600 ಕೋಟಿ ರೂ. ಠೇವಣಿಯನ್ನು ಸಂಗ್ರಹಿಸಿದ್ದು, ಈ ಬಾರಿ ಮತ್ತೆ ಅವರನ್ನು ನಿರ್ದೇಶಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ಎಲ್ಲ ಪಕ್ಷದ ಮುಖಂಡರೊಂದಿಗೆ ಸೌಹಾರ್ದತೆಯಿಂದ ಇರುವ ಸೌಮ್ಯ ಸ್ವಭಾವದ ಕುಲಗುಡೆ ಅವರು, ಬ್ಯಾಂಕ್ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಬ್ಯಾಂಕ್‌ಗೆ ಆಧುನಿಕ ಸ್ಪರ್ಶ ನೀಡಿ, ಸಹಕಾರ ಸಂಘವನ್ನು ಎತ್ತರಕ್ಕೆ ಬೆಳೆಸಲಾಗುವುದು ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ಮಾತನಾಡಿ, ಸತತ 4 ಬಾರಿ ನನ್ನನ್ನು ಆಯ್ಕೆ ಮಾಡಿದ್ದಿರಿ, ಈ ಬಾರಿ ಮತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿ, ರೈತರ ಸೇವೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.
ಬ್ಯಾಂಕ್ ನಿರ್ದೇಶಕರಾದ ರಾಜೇಂದ್ರ ಅಂಕಲಗಿ, ಶ್ರೀಕಾಂತ ಢವಣ ಹಾಗೂ ಶಂಕರಗೌಡ ಪಾಟೀಲ, ಸಂಜೀವಕುಮಾರ ಬಾನೆಸರಕಾರ, ಅರ್ಜುನ ನಾಯಿಕವಾಡಿ, ಪಾರಿಸ ಉಗಾರೆ ಸೇರಿದಂತೆ ತಾಲೂಕಿನ ಎಲ್ಲ ಪಿಕೆಪಿಎಸ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳು ಮತ್ತು ಬ್ಯಾಂಕ್ ಸಿಬ್ಬಂದಿ ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 