ವಿದ್ಯುತ್ ಶಾರ್ಟ್ ಸರ್ಕ್ಯೂಟ್ : 50 ಎಕರೆಕ್ಕಿಂತ ಹೆಚ್ಚು ಕಬ್ಬು ಬೆಳೆ ಬೆಂಕಿಗೆ ಆಹುತಿ
ಬೆಳಗಾವಿ /ಚಿಕ್ಕೋಡಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 50 ಎಕೆರೆಗೂ ಹೆಚ್ಚು ಕಬ್ಬು ಬೆಳೆ ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಡೆದಿದೆ.
ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಬಿಸಿಲಿನ ತಾಪಮಾನದಲ್ಲಿ ಬೆಂಕಿ ಹೊತ್ತುಕೊಂಡು ಕಬ್ಬು ಸುಟ್ಟುಕರಕಲಾಗಿದೆ. ಕಬ್ಬಿಗೆ ಬೆಂಕಿ ತಗಲುತ್ತಿದಂತೆ ರೈತರು,ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದಾದರೂ ಯಾವುದೇ ಪ್ರಯೋಜನೆವಾಗಿಲ್ಲ.
ಸುಮಾರು 10 ಕ್ಕೂ ಹೆಚ್ಚು ರೈತರಿಗೆ ಸೇರಿದ ಕಬ್ಬು ಸುಟ್ಟುಕರಲಾಗಿದೆ. ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರೈತರು ಹಗಲು ರಾತ್ರಿ ಎನ್ನದೆ ಸಾವಿರಾರು ರೂಪಾಯಿ ಖರ್ಚು ಮಾಡಿ ಕಷ್ಟಪಟ್ಟು ದುಡಿದು ಬೆಳೆದ ಕಬ್ಬು ಬೆಳೆ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟುಕರಕಲಾಗಿದೆ. ಸೂಕ್ತ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಅಂಕಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.