ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ
ಬೈಲಹೊಂಗಲ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗಾಗಿ (ಇವಿಎಂ) ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ ಯನ್ನು ಟ್ರೈನರ್ ಬಿ. ಎಸ್. ಭರಮಣ್ಣವರ್ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಪ್ರಸನ್ನಸಿಂಗ್ ಹಜೇರಿ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಪ್ರೋ. ಬಿ.ಬಿ.ಪಾಟೀಲ್ ವಹಿಸಿದ್ದರು. ಈ ಸಂದರ್ಭದಲ್ಲಿ ನೂರಾರು ವಿದ್ಯಾರ್ಥಿನಿಯರು ಇದ್ದರು.