ಬೆಳಗಾವಿ

ರೈತರ ಅನುಕೂಲಕ್ಕಾಗಿ ಹಿರೇಬಾಗೇವಾಡಿ ಎಪಿಎಂಸಿಯಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ

ರೈತರ ಅನುಕೂಲಕ್ಕಾಗಿ ಹಿರೇಬಾಗೇವಾಡಿ ಎಪಿಎಂಸಿಯಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ


ಬೆಳಗಾವಿ 5: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಎಪಿಎಂಸಿ ಉಪ ಮಾರುಕಟ್ಟೆ ಆವರಣದಲ್ಲಿ ರೈತರ ಅನುಕೂಲಕ್ಕಾಗಿ ಸ್ಥಾಪಿಸಿರುವ 80 ಮೆಟ್ರಿಕ್ ಟನ್ ಸಾಮರ್ಥ್ಯದ ಬೃಹತ್ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ರೈತರಿಗೆ ನಿಖರ ತೂಕ, ಪಾರದರ್ಶಕತೆ ಹಾಗೂ ಸಮಯ ಉಳಿತಾಯ ಅತ್ಯಂತ ಮುಖ್ಯ. ಈ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಎಪಿಎಂಸಿ ಉಪ ಮಾರುಕಟ್ಟೆಯಲ್ಲಿ ಆಧುನಿಕ ಸ್ಥಾಪಿಸಿರುವುದು ರೈತರಿಗೆ ಮಹತ್ವದ ಸೌಲಭ್ಯವಾಗಿದೆ ಎಂದರು.  

ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ತುಂಬಿಕೊಂಡು ಬರುವ ಟ್ರ್ಯಕ್ಟರ್, ಲಾರಿ ಸೇರಿದಂತೆ ದೊಡ್ಡ ವಾಹನಗಳ ತೂಕವನ್ನು ಒಂದೇ ಸ್ಥಳದಲ್ಲಿ ನಿಖರವಾಗಿ ಅಳೆಯಲು ಈ ವ್ಯವಸ್ಥೆಯಿಂದ ಸಾಧ್ಯವಾಗಲಿದೆ. ಹಿರೇಬಾಗೇವಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಎಪಿಎಂಸಿ ಉಪ ಮಾರುಕಟ್ಟೆಗೆ ತಂದು ವಹಿವಾಟು ನಡೆಸುತ್ತಾರೆ.

ಹೊಸ ಘಜರಛಡಿಜರಜ ಮೂಲಕ ದೊಡ್ಡ ಪ್ರಮಾಣದ ಕೃಷಿ ಉತ್ಪನ್ನ ಸಾಗಿಸುವ ವಾಹನಗಳ ತೂಕವನ್ನು ಸುಲಭವಾಗಿ ಅಳೆಯಬಹುದಾಗಿದ್ದು, ರೈತರ ಸಮಯ ಮತ್ತು ಶ್ರಮ ಉಳಿತಾಯವಾಗಲಿದೆ.

ಮಾರುಕಟ್ಟೆ ವಹಿವಾಟಿನಲ್ಲಿ ಪಾರದರ್ಶಕತೆಯೂ ಹೆಚ್ಚಲಿದೆ ಎಂದರು. ಇದೇ ರೀತಿ ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಮಾರುಕಟ್ಟೆ ಮೂಲಸೌಕರ್ಯವನ್ನು ಬಲಪಡಿಸುವ ಕಾರ್ಯವೂ ಮುಂದುವರಿಯಲಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.  


ಸುದ್ದಿ ಓದಿ