ಆನೆ ದಂತ, ಚಿರತೆಯ ಉಗುರು ವಶ : ಆರು ಮಂದಿಯ ಬಂಧನ
ಶಿವಮೊಗ್ಗ, ಜ 25,ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿ ಆನೆಯ ದಂತ ಮತ್ತು ಚಿರತೆಗಳ ಉಗುರುಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಆರು ಜನರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ನಲೂರು ಗ್ರಾಮದ ಮೇಲೆ ದಾಳಿ ನಡೆಸಿ ಆನೆಯ ದಂತವನ್ನು ವಶಕ್ಕೆ ತೆಗೆದುಕೊಂಡು, ಗ್ರಾಮ ನಿವಾಸಿ ರಾಜಗೋಪಾಲ ಮತ್ತು ನೆರತೂರು ಗ್ರಾಮದ ಕೃಷ್ಣಮೂರ್ತಿಯನ್ನು ಬಂಧಿಸಲಾಗಿದೆ.ಸಾಗರ ತಾಲೂಕಿನ ತುಮುರಿ ಗ್ರಾಮದ ಮೇಲೂ ದಾಳಿ ನಡೆಸಿ, 13 ಚಿರತೆಗಳ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಗ್ರಾಮದ ದೇವರಾಜ್, ಉದಯ ಕುಮಾರ್, ಸುಧಾಕರ ಮತ್ತು ನವೀನ್ ಅವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 