ಮಕ್ಕಳಲ್ಲಿನ ತಾರತಮ್ಯ ಹೋಗಲಾಡಿಸಿ: ಮಾನಕರ
ಬಾಗಲಕೋಟೆ24: ಗಂಡು ಮಗು ಹುಟ್ಟಿದಾಗಿನ ಸಂಭ್ರಮ ಹೆಣ್ಣು ಹುಟ್ಟಿದಾಗಲೂ ಅದೇ ಸಂಭ್ರಮ ಪಡುವ ಮೂಲಕ ಮಕ್ಕಳಲ್ಲಿನ ತಾರತಮ್ಯ ಹೋಗಲಾಡಿಸಬೇಕೆಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಹೇಳಿದರು.
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿಯನ್ನು ಬೋಧಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಎಂಬ ಲಿಂಗಬೇದ ಮಾಡಬಾರದು. ಹೆಣ್ಣು ಹುಟ್ಟುತ್ತಿದೆ ಎಂದು ತಿಳಿದರೆ ಸಾಕು ಗರ್ಭದಲ್ಲಿರುವಾಗಲೇ ಅದನ್ನು ತೆಗೆದುಹಾಕುವ ಕೆಲಸ ನಡೆಯುತ್ತಿವೆ. ವೈದ್ಯರು ಸಹ ಹುಟ್ಟುವ ಮಗು ಯಾವುದೇಂದು ತಿಳಿಸುವುದು ಅಪರಾಧವಾಗಿದ್ದು, ಅಂತಹ ಘಟನೆಗಳು ಕಂಡು ಬಂದಲ್ಲಿ ಶಿಕ್ಷೆಗೆ ಒಳಪಡಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಲಿಂಗಾನುಪಾತ ಪ್ರತಿ ಸಾವಿರ ಗಂಡು ಮಕ್ಕಳಿಗೆ 948 ಹೆಣ್ಣು ಮಕ್ಕಳು ಇದ್ದಾರೆ. ದೇಶಕ್ಕೆ ಹೋಲಿಸಿದರೆ ಈ ಸಂಖ್ಯೆ ಬಹಳಷ್ಟು ಕಡಿಮೆ ಇದೆ ಎಂದರು.
ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾದರೆ ಮಹಾಭಾರತದಲ್ಲಿ ದ್ರೋಪತಿಗೆ 5 ಜನ ಗಂಡಂದಿರು ಇರುವ ಹಾಗೇ ಪರಿಸ್ಥಿತಿ ಒದಗಿಬರುತ್ತದೆ. ಈ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕಾದರೆ ಹೆಣ್ಣು ಮಕ್ಕಳನ್ನು ರಕ್ಷಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಣ್ಣು ಮಕ್ಕಳ ಸಂರಕ್ಷಣೆ ಮತ್ತು ಪೋಷಣೆ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ ಎಂದರು.
ಸಮಾಜದಲ್ಲಿ ಎಲ್ಲ ಬಗೆಯ ಲಿಂಗತಾರತಮ್ಯಗಳನ್ನು ಕೊನೆಗೊಳಿಸಬೇಕು. ಹೆಣ್ಣು ಶಿಸುವಿನ ಹುಟ್ಟಿಗೆ ಮತ್ತು ಬದುಕಿಗೆ ಮಾರಕವಾಗಿರುವ ಎಲ್ಲ ಅಂಶಗಳನ್ನು ಹೊಡೆದೋಡಿಸಿ, ಹೆಣ್ಣು ಮಗುವಿನ ಶಿಕ್ಷಣಕ್ಕೆ ಹಾಗೂ ಅವಳಿಗೆ ಲಭಿಸಬೇಕಾದ ಪ್ರೀತಿ, ವಾತ್ಸಲ್ಯ, ಸುರಕ್ಷತೆ ಹಾಗೂ ಪೋಷಣೆ ದೊರೆಯುವಂತೆ ನೋಡಿಕೊಳ್ಳುವ ಮೂಲಕ ದೇಶದ ಶಕ್ತಿಶಾಲಿ ಹಾಗೂ ಸಮಾನ ಅಧಿಕಾರಗಳನ್ನು ಹೊಂದಿದ ಪ್ರಜೆಯಾಗುವಂತೆ ರೂಪುಗೊಳಿಸಬೇಕಾಗಿದೆ. ಇದಕ್ಕಾಗಿ ಒಂದು ವಾರ ಜಿಲ್ಲೆಯಾದ್ಯಂತ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 