ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಸೈಯದ್
ಲೋಕದರ್ಶನ ವರದಿ
ಕೊಪ್ಪಳ : ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಾ.ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿಯ ಅಧ್ಯಕ್ಷ ಕೆ.ಎಂ.ಸೈಯದ್ ಕರೆ ನೀಡಿದರು.
ಅವರು ನಗರದ ಹೊಸಪೇಟೆ ರಸ್ತೆಯ ಡಾ.ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯ 150ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ದಬ್ಬಾಳಿಕೆಯ ವಿರುದ್ಧ ಹೋರಾಡಿದ ಮಹಾತ್ಮರು, ಸತ್ಯ, ಶಾಂತಿ, ಅಹಿಂಸೆಯಿಂದ ಭಾರತವನ್ನಲ್ಲದೆ ಇಡೀ ವಿಶ್ವವನ್ನೇ ಗೆದ್ದವರು, ಇಂದಿನ ಯುವಕರು ಗಾಂಧೀಜಿಯವರ ಸರಳತೆ ಮತ್ತು ಅಹಿಂಸಾ ಮಾರ್ಗಗಳನ್ನು ಅನುಸರಿಸಬೇಕು ಎಂದರು. ಡಾ.ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿ ನಿ. ಉಪಾಧ್ಯಕ್ಷ ಅಜ್ಮೀರ್ ಅಲಿ , ಕಾರ್ಯನಿರ್ವಾಹಕ ಅಧಿಕಾರಿ ಎಫ್, ಎ, ನೂರಭಾಷ, ಜಾಫರ್ ಸಾದಿಕ್ ಕುದ್ರಿಮೋತಿ, ಅನ್ವರಭಾಷ,ಜಾವೀದ ಮಂಗಳಪೂರ, ಇಬ್ರಾಹಿಂ, ಡಿ,ಎಸ್, ಎಸ್ಎಸ್ ಹಿರೆಮಠ, ರಾಮಕೃಷ್ಣ, ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 