ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಕೊಲಂಬೊ: ಜುಲೈ 13: ಶ್ರೀಲಂಕಾ ಅಧ್ಯಕ್ಷ ಗೋತಬಯ ಮಾಲ್ಡೀವ್ಸ್‌ಗೆ ಪಲಾಯನ ಮಾಡುತ್ತಿದ್ದಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಅಧ್ಯಕ್ಷ ಗೋತಬಯ ರಾಜಪಕ್ಸೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ನಂತರ ಪ್ರತಿಭಟನಾಕಾರರು ದೇಶಾದ್ಯಂತ ಪ್ರತಿಭಟನೆ ಕೈಗೊಂಡಿದ್ದು, ಶ್ರೀಲಂಕಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರಿಂದ ಆಯ್ಕೆಯಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಶ್ರೀಲಂಕಾದ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಣಕ್ಕಾಗಿ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ದೇಶದ ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂಗೆ ಆದೇಶಿಸಿದ್ದಾರೆ.
ಇನ್ನು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಯ ಗೋಡೆಗಳನ್ನು ಹತ್ತಲು ಪ್ರಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯು ಸಿಂಪಡಿಸಿದ್ದಾರೆ. ಇನ್ನು ಗಲಭೆಕೋರರನ್ನು ಬಂಧಿಸುವಂತೆ ಪ್ರಧಾನಿ ರನಿಲ್ ವಿಕ್ರಮಸಿಂಘೆ ಆದೇಶಿಸಿದ್ದಾರೆ.