ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ
ನವದೆಹಲಿ, ಆಗಸ್ಟ್ 16: ಅಫ್ಘಾನಿಸ್ತಾನ ವನ್ನು ತಾಲಿಬಾನಿಗಳು ವಶಪಡಿಸಿಕೊಂಡಿರುವ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯು ಎನ್ ಎಸ್ ಸಿ) ಇಂದು ತುರ್ತು ಸಭೆ ಸೇರಲಿದೆ. ಸೋಮವಾರ ರಾತ್ರಿ 7.30 ಕ್ಕೆ ಭಾರತದ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಅಫ್ಘಾನಿಸ್ತಾನದಲ್ಲಿನ ಪ್ರಸ್ತುತ ಪರಿಸ್ಥಿತಿ, ಮುಂದಿನ ಕಾರ್ಯಾಚರಣೆಗಳ ಬಗ್ಗೆ ಚರ್ಚೆ ನಡೆಸಲಿದೆ. ಅಫ್ಘಾನಿಸ್ತಾನದಲ್ಲಿ ನಾಗರಿಕರ ಹಕ್ಕುಗಳಿಗೆ ಯಾವುದೇ ಭಂಗವಾಗದಂತೆ ತಾಲಿಬಾನ್ ಗೆ ಸ್ಪಷ್ಟ ಸಂದೇಶವನ್ನು ರವಾನಿಸಲು ವಿಶ್ವಸಂಸ್ಥೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.