ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ ಒತ್ತು: ಸಚಿವ ಡಾ. ಶರಣಪ್ರಕಾಶ ಪಾಟೀಲ
Emphasis on medical education and skill development: Minister Dr. Sharanaprakash Patil
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ ಒತ್ತು: ಸಚಿವ ಡಾ. ಶರಣಪ್ರಕಾಶ ಪಾಟೀಲ
ಗದಗ ಸೆ.12: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ. ಸಚಿವರು ಸೆ.13ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10 ಗಂಟೆಗೆ ಗದಗದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಗೆ ಆಗಮಿಸಿ, ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಅಳವಡಿಸಿರುವ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಲೋಕಾರೆ್ಣ ಮಾಡಲಿದ್ದಾರೆ. ನಂತರ ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದು, ಐಎಂಎ ಗದಗ ವತಿಯಿಂದ ಆಯೋಜಿಸಿರುವ ಶತಮಾನೋತ್ಸವ ಆಚರಣೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಕಲಬುರಗಿಗೆ ಪ್ರಯಾಣಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 