ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
Emphasis on the economic empowerment of the Bhovi community
ಜಯಪುರ, ಸೆ. 7: ಭೋವಿ ಸಮಾಜದ ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳ ಮೂಲಕ ನೆರವು ನೀಡುತ್ತಿದ್ದು, ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಎಂ. ರಾಮಪ್ಪ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ, ನೇರ ಸಾಲ, ಮಹಿಳಾ ಸಬಲೀಕರಣ, ಮೈಕ್ರೋ ಕ್ರೆಡಿಟ್ ಸೇರಿದಂತೆ ಹಲವು ಯೋಜನೆಗಳನ್ನು ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಭೋವಿ ಸಮಾಜದ ಮಕ್ಕಳಿಗೆ ಶಿಕ್ಷಣ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಬಡತನ ನಿರ್ಮೂಲನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ 2021-22ರಿಂದ 2025-26ರವರೆಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ 413 ಫಲಾನುಭವಿಗಳಿಗೆ ?4.80 ಕೋಟಿ ವಿತರಿಸಲಾಗಿದೆ. ಉದ್ಯಮಶೀಲತಾ ಯೋಜನೆಯಡಿ ನಾಲ್ವರಿಗೆ ?4 ಲಕ್ಷ, ಸ್ವಾವಲಂಬಿ ಸಾರಥಿ ಯೋಜನೆಯಡಿ 19 ಫಲಾನುಭವಿಗಳಿಗೆ ?76 ಲಕ್ಷ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಯಡಿ 40 ಫಲಾನುಭವಿಗಳಿಗೆ ?10 ಲಕ್ಷ ವಿತರಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ 12 ಫಲಾನುಭವಿಗಳಿಗೆ ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು, ಇದಕ್ಕಾಗಿ ?64 ಲಕ್ಷ ವೆಚ್ಚ ಮಾಡಲಾಗಿದೆ ಎಂದು ಡಾ. ರಾಮಪ್ಪ ತಿಳಿಸಿದರು. ನಿಗಮದ ಸೌಲಭ್ಯಗಳನ್ನು ಪಡೆಯಲು ಭೋವಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು ಎಂದು ಅವರು ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 