ಉದ್ಯೋಗ ಖಾತರಿ ಯೋಜನೆಯ ಪ್ರಚಾರ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಟಗೇರಿ 17: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಂದು ದಿನಕ್ಕೆ ಗಂಡು-ಹೆಣ್ಣಿಗೆ 249 ರೂಪಾಯಿಗಳ ಸಮಾನ ಕೂಲಿ ನೀಡಲಾಗುವುದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಹೇಳಿದರು.
ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ ಸಹಯೋಗದಲ್ಲಿ ಗುರುವಾರ ಅ.17 ರಂದು ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಚಾರ ವಾಹಿನಿ ಸ್ವಾಗತ ಮತ್ತು ಪ್ರಚಾರ ಕಾರ್ಯಕ್ರಮದ ನೇತೃತ್ವ ವಹಿಸಿ, ಉದ್ಯೋಗ ಖಾತರಿ ಯೋಜನೆ ಮಾಹಿತಿಯುಳ್ಳ ಕರಪತ್ರ ವಿತರಿಸಿ ಮಾತನಾಡಿದರು.
ಇಲ್ಲಿಯ ಗ್ರಾಮ ಪಂಚಾಯತ ಅಧಿಕಾರಿಗಳನ್ನು ಸ್ಥಳೀಯರು ಭೇಟಿಯಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ತಿಳಿಸಿದರು. ಗ್ರಾಮದ ಪ್ರಮುಖ ಸ್ಥಳ, ಬೀದಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುರಿತು ಪ್ರಚಾರ ವಾಹಿನಿ ಮೂಲಕ ಗ್ರಾಮಸ್ಥರಲ್ಲಿ ತಿಳುವಳಿಕೆ ಮೂಡಿಸುವ ಕಾರ್ಯಕ್ರಮ ನಡೆಯಿತು.
ಈ ವೇಳೆ ಗ್ರಾಪಂ ಪಿಡಿಒ ಬಿ.ಎಫ್.ದಳವಾಯಿ, ಕಾರ್ಯದರ್ಶಿ ಗೌಡಪ್ಪ ಮಾಳೇದ, ಪರಶುರಾಮ ಇಟಗೌಡ್ರ, ಕಾಕ್ರ್ಲ ಸುರೇಶ ಬಾಣಸಿ, ವಿಠಲ ಚಂದರಗಿ, ಗ್ರಾಪಂ ಸದಸ್ಯ ಸುಭಾಷ ಕರೆಣ್ಣವರ, ಮಲ್ಲಪ್ಪ ಪಣದಿ, ಉದ್ದಪ್ಪ ಚಂದರಗಿ, ಮುತ್ತೆಪ್ಪ ವಡೇರ ಸೇರಿದಂತೆ ಸ್ಥಳೀಯ ಗ್ರಾಪಂ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 