ಕೊರೊನಾ ನಿಯಂತ್ರಣಕ್ಕೆ ಅಪಾರ್ಟ್ ಮೆಂಟ್ ನಲ್ಲಿ ನಿಯಮ ಜಾರಿ
ಬೆಂಗಳೂರು, ಮಾ.30, ಕೊರೊನಾ ಸೋಂಕು ತಡೆಗಟ್ಟಲು ಈಗಾಗಲೇ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗ ಕೊರೊನಾ ತಡೆಗೆ ಸಿಲಿಕಾನ್ ಸಿಟಿ ಅಪಾರ್ಟ್ ಮೆಂಟ್ ಗಳಲ್ಲಿ ಕಠಿಣ ಕ್ರಮ ಜರುಗಿಸಲಾಗಿದೆ.ಬೆಂಗಳೂರಿನ ಅಪಾರ್ಟ್ ಮೆಂಟ್ಸ್ ಅಸೋಸಿಯೇಷನ್ ವತಿಯಿಂದ ಹೊಸ ನಿಯಮವೊಂದು ಜಾರಿ ಮಾಡಲಾಗಿದೆ. ಎಲ್ಲರೂ ಕಡ್ಡಾಯವಾಗಿ ತಮ್ಮ ಫ್ಲ್ಯಾಟ್ ಗಳಲ್ಲಿಯೇ ಇರಬೇಕು. ಒಂದು ವೇಳೆ ಅಪಾರ್ಟ್ ನಿಂದ ಹೊರಗೆ ಹೋದರೆ, ಪುನಃ ಅಪಾರ್ಟ್ ಮೆಂಟ್ ಪ್ರವೇಶಿಸುವಂತಿಲ್ಲ ಎಂಬ ನಿಯಮ ಜಾರಿ ಮಾಡಲಾಗಿದೆ.ಕೇವಲ ತುರ್ತು ಸಂದರ್ಭವಿದ್ದಾಗ ಮಾತ್ರ ಹೊರಗಡೆ ಹೋಗಬಹುದು. ಆದರೆ, ಹೋಗುವುದಕ್ಕಿಂತ ಮುಂಚಿತವಾಗಿ, ಎಲ್ಲಿ ಹೋಗುತ್ತಿದ್ದಾರೆ? ಯಾತಕ್ಕಾಗಿ ಎಂಬಿತ್ಯಾದಿ ಮಾಹಿತಿಗಳನ್ನು ಕಡ್ಡಾಯವಾಗಿ ನಮೂದಿಸಬೇಕು ಎಂಬ ನಿಯಮ ಜಾರಿಗೊಳಿಸಲಾಗಿದೆ.ಈ ಮೂಲಕ ಅಪಾರ್ಟ್ ಮೆಂಟ್ ಅಸೋಸಿಯೇಷನ್ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 