ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಗುಣಮಟ್ಟ ಹೆಚ್ಚಿಸಿ: ಸಚಿವ ರುದ್ರ್ಪ ಲಮಾಣಿ
Enhance the quality of learning in government schools: Minister Rudrappa Lamani
ಹಾವೇರಿ 09: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದರ ಜೊತೆಗೆ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಿ, ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಶಿಕ್ಷಕರು, ಅಧಿಕಾರಿಗಳು ಹಾಗೂ ಶಿಕ್ಷಣ ಸುಧಾರಣಾ ಸಮಿತಿ ಸದಸ್ಯರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಮಾನಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಭಾನುವಾರ ನಡೆದ ವಿಧಾನಸಭಾ ಮತಕ್ಷೇತ್ರ ಮಟ್ಟದ ಶಿಕ್ಷಣ ಸುಧಾರಣಾ ಸಮಿತಿ ಹಾಗೂ ತಾಲೂಕು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು. ಶಾಲಾ ಕಟ್ಟಡ, ಶೌಚಾಲಯ, ಕುಡಿಯುವ ನೀರು, ಶಾಲಾ ಆವರಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಿ: ಆಂಗ್ಲ ಮಾಧ್ಯಮ ಶಿಕ್ಷಣದತ್ತ ಪೋಷಕರ ಒಲವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣದೊಂದಿಗೆ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸರ್ಕಾರಿ ಶಾಲೆಗಳತ್ತ ಆಕರ್ಷಿಸಬೇಕು ಎಂದು ಸಚಿವರು ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ಮೂಲಕ ಎಲ್ಕೆಜಿಯಿಂದ ಪಿಯುಸಿವರೆಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಇಂತಹ ಶಾಲೆಗಳನ್ನು ಅಭಿವೃದ್ಧಿಪಡಿಸುವ ಕುರಿತು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದ್ದು, ಹಲವು ಶಾಲೆಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಶೇ.98 ಫಲಿತಾಂಶಕ್ಕೆ ಶಿಕ್ಷಕರ ಶ್ರಮ ಕಾರಣ: ಕಳೆದ ಸಾಲಿನ ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಉತ್ತಮ ಸಾಧನೆ ಕಂಡುಬಂದಿರುವುದು ಸಂತಸದ ಸಂಗತಿಯಾಗಿದೆ. ಹಾವೇರಿ ಜಿಲ್ಲೆ ಹಾಗೂ ತಾಲೂಕಿನಲ್ಲಿ ಉತ್ತಮ ಫಲಿತಾಂಶ ದಾಖಲಾಗಲು ಶಿಕ್ಷಕರು ಹಗಲು-ರಾತ್ರಿ ಶ್ರಮಿಸಿದ್ದಾರೆ. ಈ ಸಾಧನೆಯನ್ನು ಮುಂದುವರಿಸಿಕೊಂಡು ಮುಂದಿನ ದಿನಗಳಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವ ಗುರಿ ಹೊಂದಬೇಕು ಎಂದು ಸಚಿವರು ಹೇಳಿದರು.
ಶಿಕ್ಷಕರು ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ಮಕ್ಕಳ ಕಲಿಕೆ ಮತ್ತು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಲೆಗಳ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಅರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಶಿಕ್ಷಣ ಸುಧಾರಣಾ ಸಮಿತಿಯು ಕನಿಷ್ಠ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಶಾಲೆಗಳಲ್ಲಿನ ಸಮಸ್ಯೆಗಳು, ಮಕ್ಕಳ ದಾಖಲಾತಿ, ಕಲಿಕಾ ಗುಣಮಟ್ಟ ಹಾಗೂ ಮೂಲಸೌಕರ್ಯಗಳ ಕುರಿತು ಚರ್ಚಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಅಂಗವಿಕಲ ಮಕ್ಕಳಿಗೆ ಕಲಿಕಾ ಉಪಕರಣಗಳನ್ನು ವಿತರಿಸಲಾಯಿತು.
ಸಭೆಯಲ್ಲಿ ಉಪನಿರ್ದೇಶಕ ಮೋಹನ್ ದಂಡಿನ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣಕುಮಾರ್ ನಾಯಕ್, ಸವಣೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ಭಗವತ್ಗೌಡ, ನಗರಸಭೆ ಸದಸ್ಯರಾದ ಸಂಜೀವಕುಮಾರ ನೀರಲಗಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೋಟ್ರೇಶಪ್ಪ ಬಸೆಗಣ್ಣಿ, ಶಿಕ್ಷಣ ಸುಧಾರಣಾ ಸಮಿತಿ ಸದಸ್ಯರು, ಅಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 