ರೈತರಿಗೆ ಸಮರ್ಕ ವಿದ್ಯುತ್ ಪೂರೈಸಿ: ಹಿರೇಗೌಡ
Ensure adequate power supply to farmers: Hiregowda
ದೇವರಹಿಪ್ಪರಗಿ 09 : ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಇದರ ನಡುವೆ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯವಾಗುತ್ತಿರುವುದರಿಂದ ಬೆಳೆಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ರೈತರ ಅಗತ್ಯಕ್ಕೆ ಅನುಗುಣವಾಗಿ ಹೆಸ್ಕಾಂ ಸಮರ್ಕ ವಿದ್ಯುತ್ ಪೂರೈಸಬೇಕು ಎಂದು ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಶಂಕರಗೌಡ ಹಿರೇಗೌಡ ಆಗ್ರಹಿಸಿದರು. ತಾಲೂಕಿನ ಕೋರವಾರ ಗ್ರಾಮದ ಹೆಸ್ಕಾಂ ಕಚೇರಿ ಎದುರು ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 500 ಅಡಿ ಆಳಕ್ಕೆ ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಲಭ್ಯವಿರುವ ನೀರನ್ನು ಬೆಳೆಗಳಿಗೆ ಹಾಯಿಸಲು ವಿದ್ಯುತ್ ಪೂರೈಕೆ ಸಮರ್ಕವಾಗಿಲ್ಲ.
24 ಗಂಟೆ ವಿದ್ಯುತ್ ನೀಡುವುದಾಗಿ ಹೇಳಿದರೂ ವಾಸ್ತವದಲ್ಲಿ ಸಮರ್ಕ ಪೂರೈಕೆಯಾಗುತ್ತಿಲ್ಲ. ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ನಿಯಮಾನುಸಾರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು. ರೈತ ಮುಖಂಡ ಮಲ್ಲನಗೌಡ ಬಿರಾದಾರ ಮಾತನಾಡಿ, ಹೆಸ್ಕಾಂ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯೂ ಕೈಕೊಟ್ಟಿರುವ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲೂ ನಿರ್ಲಕ್ಷ್ಯ ಮುಂದುವರಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಹೆಸ್ಕಾಂ ಸಿಂದಗಿ ವಿಭಾಗದ ಹಾಗೂ ದೇವರಹಿಪ್ಪರಗಿ ತಾಲೂಕು ಪ್ರಭಾರಿ ಎಇಇ ಚಂದ್ರಕಾಂತ ನಾಯಕ ಮಾತನಾಡಿ, ಮಳೆ ಕೊರತೆಯಿಂದ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ.
ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯುತ್ ಉತ್ಪಾದನೆಯಲ್ಲಿ ಉಂಟಾಗಿರುವ ಸಮಸ್ಯೆಯಿಂದ ಪೂರೈಕೆಗೆ ಅಡಚಣೆಯಾಗಿದೆ. ಶೀಘ್ರ ಸಮಸ್ಯೆ ಬಗೆಹರಿಸ ಲಾಗುವುದು ಎಂದು ಭರವಸೆ ನೀಡಿದರು. ರಾಜಶೇಖರ ಸಿದ್ದರೆಡ್ಡಿ, ನಿಂಗನಗೌಡ ಅಂಗಡಿ, ಅಜಯ ಕೊಣ್ಣೂರ, ಕಲ್ಲನಗೌಡ ಸುಂಕದ, ಶರಣಗೌಡ ಪೊಲೀಸ ಪಾಟೀಲ, ಪ್ರಾಣೇಶ ನಾಟಿಕಾರ, ಮಲ್ಲನಗೌಡ ಛಾಯಗೋಳ, ಸೋಮಯ್ಯ ಹಿರೇಮಠ, ಬಾಬಾಗೌಡ ಸುಂಬಡ, ಕಾಶೀನಾಥ ಸುಂಬಡ, ಶರಣಗೌಡ ನಾಯ್ಕಲ, ಶಂಕರಗೌಡ ಬಿರಾದಾರ, ಬಾಬಾಗೌಡ ಸಿದ್ದರೆಡ್ಡಿ, ಸುಬ್ಬನಗೌಡ ಸಿದ್ದರೆಡ್ಡಿ ಸೇರಿದಂತೆ ರೈತರು, ಗ್ರಾಮಸ್ಥರು ಹಾಗೂ ಹೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 