ಕೊಪ್ಪಳ 23: ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್-2 ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಚರ್ಚಿಸಲು ಸಂಬಂಧಪಟ್ಟ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜೂಮ್ ವಿ.ಸಿ ಮೂಲಕ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಡಿದರು.
ಜಿಲ್ಲೆಯ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ನಿಯಮಾನುಸಾರ ಪರೀಕ್ಷೆಗೊಳಪಡಿಸಿ ಶುದ್ಧತೆಯನ್ನು ಖಚಿತಪಡಿಸಿಕೊಂಡು ಅಗತ್ಯ ಕ್ರಮವಹಿಸಬೇಕು. ಅಲ್ಲದೇ ಓ.ಎಚ್.ಟಿ., ಮಿನಿ ವಾಟರ್ ಟ್ಯಾಂಕ್, ಸಿಸ್ಟರ್ನ್ ಜಿ.ಎಲ್.ಎಸ್.ಆರ್ (ಓಊಖಿ, ಒಟಿ ಘಚಿಣಜಡಿ ಖಿಚಿಟಿಞ, ಅಣಜಡಿಟಿ ಉಐಖಖ) ಸಂಪು ಹಾಗೂ ನೀರು ಸಂಗ್ರಾಹಕಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ, ಶುದ್ಧಿಕರಿಸಲು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಚರಂಡಿ ಪಕ್ಕದಲ್ಲಿರುವ ಪೈಪ್‌ಲೈನ್‌ಗಳನ್ನು ಸ್ಥಳಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಮತ್ತು ಮೇವಿನ ಸಮಸ್ಯೆ ಉದ್ಭವಿಸಿದರೆ ಸಂಬಂಧಿಸಿದ ತಾಲ್ಲೂಕುಗಳ ತಹಶೀಲ್ದಾರ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಕ್ಷಣ ಸ್ಪಂದಿಸಬೇಕು. ಈಗಾಗಲೇ ಗ್ರಾಮ ಮಟ್ಟದ ಮತ್ತು ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್‌ನಲ್ಲಿ ಸಮಿತಿಯನ್ನು ರಚನೆ ಮಾಡಿಕೊಳ್ಳಲಾಗಿದೆ ಹಾಗೂ ಸದ್ಯಕ್ಕೆ ಜಿಲ್ಲೆಯಲ್ಲಿ ಅನುದಾನದ ಕೊರತೆ ಇರುವುದಿಲ್ಲ ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯತಿಗಳಿದ್ದು, 722 ಗ್ರಾಮಗಳಿರುತ್ತವೆ. ಈ ಗ್ರಾಮಗಳಲ್ಲಿ 472 ಗ್ರಾಮಗಳಿಗೆ ಡಿ.ಬಿ.ಓ.ಟಿ., ಎಂ.ವಿ.ಎಸ್ ಯೋಜನೆ ಮುಖಾಂತರ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 2278 ಸರ್ಕಾರಿ ಮತ್ತು 5551 ಖಾಸಗಿ ಬೋರ್‌ವೆಲ್‌ಗಳಿದ್ದು, ಇದರಲ್ಲಿ 776 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿರುತ್ತದೆ. 15 ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಿದ್ದು, ಅಲ್ಲಿ 17 ಖಾಸಗಿ ಬೋರ್‌ವೆಲ್‌ಗಳ ಮಾಲೀಕರಿಂದ ಕರಾರು ಪತ್ರವನ್ನು ಮಾಡಿಸಿಕೊಂಡು ಕುಡಿಯುವ ನೀರು ಪೂರೈಸಲಾಗುತ್ತಿದೆ. ಜಿಲ್ಲೆಯ ನಗರ ಪ್ರದೇಶದಲ್ಲಿ ಜೂನ್ ಮಾಹೆಯವರೆಗೆ ಕುಡಿಯುವ ನೀರಿನ ಸಮಸ್ಯೆ ಇರುವದಿಲ್ಲ ಮತ್ತು ನಗರ ಪ್ರದೇಶ ಸರ್‌ಫೇಸ್ ವಾಟರ್ (ಖಣಡಿಜಿಚಿಛಿಜ ಘಚಿಣಜಡಿ) ಮತ್ತು ಬೋರ್‌ವೆಲ್ ನಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ ಒಟ್ಟು 860 ಬೋರ್‌ವೆಲ್‌ಗಳು ಇದ್ದು, ಅದರಲ್ಲಿ 749 ಬೋರ್‌ವೆಲ್‌ಗಳು ಚಾಲನೆಯಲ್ಲಿರುತ್ತವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ತುಂಗಭದ್ರಾ ಹಿನ್ನಿರಿನಿಂದ 0.3 ಟಿ.ಎಂ.ಸಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ದೂರನ್ನು ಸಲ್ಲಿಸಲು ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿರುತ್ತದೆ. ಇದುವರೆಗೂ ಗ್ರಾಮೀಣ ಪ್ರದೇಶದಲ್ಲಿ 18 ಮತ್ತು ನಗರ ಪ್ರದೇಶದಲ್ಲಿ 101 ದೂರುಗಳು ಸ್ವೀಕೃತವಾಗಿದ್ದು, ಇವುಗಳನ್ನು ಬಗೆಹರಿಸಲಾಗಿದೆ. ಈ ದೂರುಗಳು ಪೈಪ್‌ಲೈನ್ ದುರಸ್ಥಿ, ಕುಡಿಯುವ ನೀರು ಒದಗಿಸಲು ಮತ್ತು ಮೋಟರ್ ದುರಸ್ಥಿಗೆ ಸಂಬಂಧಿಸಿರುತ್ತವೆ ಎಂದರು.
ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕಾ ಮಟ್ಟದ ಕಾರ್ಯಪಡೆ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಶುಕ್ರವಾರ (ಜೂಮ್ ವಿ.ಸಿ ಮೂಲಕ) ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಪಶು ಸಖಿ, ಕೃಷಿ ಸಖಿ ಮತ್ತು ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಾಪ್ತಾಹಿಕ ಸಭೆಗಳನ್ನು ನಡೆಸಲಾಗುತ್ತಿದೆ ಮತ್ತು ಅದರ ನಡಾವಳಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 1016004.16 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇನ್ನೂ 66 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿರುತ್ತದೆ. ಸದ್ಯಕ್ಕೆ ಮೇವಿನ ಸಮಸ್ಯೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ಜಿಲ್ಲಾಧಿಕಾರಿ ಕಛೇರಿಯ ಶಿವುಕುಮಾರ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.