ಬಳ್ಳಾರಿ

ಕುಡಿಯುವ ನೀರು, ಮೇವಿಗೆ ಕೊರತೆಯಾಗದಂತೆ ಎಚ್ಚರ ವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕ ಚಂದ್ರ ಕೆ.ವಿ ಸೂಚನೆ

ಕುಡಿಯುವ ನೀರು, ಮೇವಿಗೆ ಕೊರತೆಯಾಗದಂತೆ ಎಚ್ಚರ ವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕ ಚಂದ್ರ ಕೆ.ವಿ ಸೂಚನೆ
Ensure there is no shortage of drinking water and fodder: District In-charge Secretary Dr. Trilok Ch

ಲೋಕದರ್ಶನ ವರದಿ 

  ಬಳ್ಳಾರಿ,ಅ.17 :  ಕುಡಿಯುವ ನೀರು, ಮೇವು ಸೇರಿದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ನಿರಂತರ ನಿಗಾ ವಹಿಸಿ, ಜನ-ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕ ಚಂದ್ರ ಕೆ.ವಿ ಅವರು ಹೇಳಿದರು. 

ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲೆಯ ‘ಬರ ಪರಿಸ್ಥಿತಿ ನಿರ್ವಹಣೆ’ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

*ಶೇ. 49 ರಷ್ಟು ಮಳೆ ಕೊರತೆ:* 

ಬಳ್ಳಾರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರ ಪರಿಸ್ಥಿತಿ ತೀವ್ರಗೊಂಡಿದೆ. ನೈಋತ್ಯ ಮುಂಗಾರು ಅವಧಿಯಲ್ಲಿ (ಜೂನ್ 1 ರಿಂದ ಸೆಪ್ಟೆಂಬರ್ 30 ರವರೆಗೆ) ಜಿಲ್ಲೆಯಲ್ಲಿ ವಾಡಿಕೆಯಂತೆ 365.6 ಮಿ.ಮೀ. ಮಳೆಯಾಗಬೇಕಿತ್ತು, ಆದರೆ ಕೇವಲ 186.3 ಮಿ.ಮೀ. ಮಳೆಯಾಗಿದ್ದು, ಶೇಕಡಾ 49 ರಷ್ಟು ಕೊರತೆ ಕಂಡುಬಂದಿದೆ.

          ಅದರಲ್ಲೂ ಸಂಡೂರು ತಾಲೂಕಿನಲ್ಲಿ ಶೇ. 68 ಹಾಗೂ ಕಂಪ್ಲಿ ತಾಲೂಕಿನಲ್ಲಿ ಶೇ. 65 ರಷ್ಟು ಗಣನೀಯ ಮಳೆ ಕೊರತೆ ದಾಖಲಾಗಿದೆ. ಪರಿಣಾಮವಾಗಿ ಅಂತರ್ಜಲ ಮಟ್ಟವು ತೀವ್ರವಾಗಿ ಕುಸಿದಿದ್ದು, ಸಂಡೂರಿನಲ್ಲಿ ಗರಿಷ್ಠ 8.26 ಮೀಟರ್‌ಗಳಷ್ಟು ಅಂತರ್ಜಲ ಕುಸಿತ ಕಂಡಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು ತಿಳಿಸಿದರು. 


ಸುದ್ದಿ ಓದಿ