ವಿಜಯಪುರ

ಕೊನೆಯ ಭಾಗದ ರೈತರಿಗೂ ನೀರು ತಲುಪಿಸಿ: ಶಾಸಕ ವಿಠ್ಠಲ ಕಟಕಧೊಂಡ ಸೂಚನೆ

ಕೊನೆಯ ಭಾಗದ ರೈತರಿಗೂ ನೀರು ತಲುಪಿಸಿ: ಶಾಸಕ ವಿಠ್ಠಲ ಕಟಕಧೊಂಡ ಸೂಚನೆ


ವಿಜಯಪುರ 17: ಸೇವಾ ಮನೋಭಾವದಿಂದ ಕೆಲಸ ಮಾಡುವುದೇ ಸರ್ಕಾರದ ಉದ್ದೇಶ: ಶಾಸಕ ವಿಠ್ಠಲ ಕಟಕ ಧೋಂಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ; ಕೊನೆಯ ಭಾಗದ ರೈತರಿಗೂ ನೀರು ತಲುಪಿಸಲು ಕ್ರಮವಾರ್ತಾ ಭಾರತಿ ಽ ಚಡಚಣ: ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಹಾಗೂ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು ಎಂಬ ಸೇವಾ ಮನೋಭಾವದಿಂದ ಕೆಲಸ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಸ್ಥಳೀಯ ಸಂಸ್ಥೆಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಮರ​‍್ಕವಾಗಿ ಕಾರ್ಯನಿರ್ವಹಿಸದಿದ್ದರೆ, ಅಂತಹ ಅಧಿಕಾರಿಗಳನ್ನು ಮನೆಗೆ ಕಳುಹಿಸುವಂತಹ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.


ತಾಲೂಕಿನ ಬರಡೋಲ ಗ್ರಾಮದಲ್ಲಿ ನಡೆದ ‘ಪ್ರಜಾ ಸೇವಾ ಅಭಿಯಾನ’ ಜನಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚಡಚಣ ತಾಲೂಕಿನಲ್ಲಿ ಸಂಪೂರ್ಣ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ನಾರಾಯಣಪುರ ಎಡದಂಡೆ ಕಾಲುವೆಯ ನೀರು ಕೊನೆಯ ಭಾಗದ ರೈತರ ಜಮೀನುಗಳಿಗೂ ತಲುಪುತ್ತಿಲ್ಲ ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇನೆ ಎಂದು ತಿಳಿಸಿದರು. ಮುಂದಿನ ಆಗಸ್ಟ್ವರೆಗೆ ನೀರಿನ ಅಭಾವ ಎದುರಾಗುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.  


ಸುದ್ದಿ ಓದಿ