ಹೂವಿನ ಹಡಗಲಿ

ನರೇಗಾ ಕಾಮಗಾರಿ ಸ್ಥಳದಲ್ಲಿ ಪರಿಸರ ದಿನಾಚರಣೆ

ನರೇಗಾ ಕಾಮಗಾರಿ ಸ್ಥಳದಲ್ಲಿ  ಪರಿಸರ ದಿನಾಚರಣೆ

ಲೋಕದರ್ಶನ ವರದಿ 

ಹೂವಿನಹಡಗಲಿ  06:   ನರೇಗಾ ಯೋಜನೆಯು ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೇ  ಹಸಿರು ಕ್ರಾಂತಿಗೆ ಪೂರಕವಾಗಿ ಗ್ರಾಮೀಣ  ಭಾಗದಲ್ಲಿ ಸಮತೋಲನ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಗ್ರಾ.ಪಂ.ಮಾಜಿ ಸದಸ್ಯ ರುದ್ರಗೌಡ ಹೇಳಿದರು.ತಾಲ್ಲೂಕಿನ ಹೊಳಗುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ನರೇಗಾ ಕಾಮಗಾರಿ ಸ್ಥಳದಲ್ಲೇ  ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿ ಮಾತನಾಡಿದರು.ಪ್ರತಿದಿನ ಕೇವಲ ಶ್ರಮದಾನಕ್ಕೆಸೀಮಿತವಾಗದೇ ನರೇಗಾ ಕೂಲಿ ಕಾರ್ಮಿಕರು, ಇಂದು ಪರಿಸರ ಉಳಿಸುವ ನಿಟ್ಟಿನಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಹೊತ್ತುಕೊಂಡಿದ್ದು ಜವಾಬ್ದಾರಿಯನ್ನು ಮಹತ್ವದ ನಿರ್ಧಾರವಾಗಿದ್ದು, ಅವುಗಳನ್ನು ಮಕ್ಕಳಂತೆ ಪೋಷಿಸಬೇಕು ಎಂದರು.ನರೇಗಾ ಕಾಮಗಾರಿ ಸ್ಥಳದಲ್ಲಿ  ಹಾಗೂ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿ ಸ್ಥಳದ ಸುತ್ತಮುತ್ತ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅದ್ಯಕ್ಷ ದಡಾರ​‍್ಪ ಮತ್ತು ಭಾಷಾ ಸಾಹೇಬ್  ಗ್ರಾಮ ಪಂಚಾಯತಿ ಸಿಬ್ಬಂದಿ, ಕಾಯಕ ಬಂಧು ಹಾಗೂ ನರೇಗಾ ಕೂಲಿಕಾರ್ಮಿಕರು ಹಾಜರಿದ್ದರು. 


ಸುದ್ದಿ ಓದಿ