ಸ.ಮಾ. ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ
Environment Day celebrated by planting saplings at S.M.A. Primary Kannada Girls' School
ಲಕ್ಷ್ಮೇಶ್ವರ 05 : " ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಕಾಡು ಬೆಳೆಸಿ ನಾಡು ಉಳಿಸಿ ಎಂದು ಮಾಜಿ ಯೋಧರಾದ ಎಚ್ ಡಿ ಸಂಜೀವಣ್ಣನವರು ಹೇಳಿದರು ಅವರು ಪಟ್ಟಣದಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯ ಆವರಣದಲ್ಲಿ ಸಸಿ ನೆಡುವುದರ ಮೂಲಕ ಎಲ್ಲರೂ ಪರಿಸರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು ವಿಶ್ರಾಂತ ಶಿಕ್ಷಕರಾದ ಐ ಎಸ್ ಮಡಿವಾಳರ ಅವರು ಮಾತನಾಡಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗತಿಕ ಜಾಗೃತಿ ಮೂಡಿಸುವುದು ಮತ್ತು ಪ್ರಕೃತಿಯನ್ನು ರಕ್ಷಿಸಲು ಜನರನ್ನು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಮಾತನಾಡಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏಕ್ ಪೇಡ್ ಮಾಕೆ ನಾಮ್ 3.0, ಅಭಿಯಾನವನ್ನು ಎಲ್ಲ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು ಈ ಸಂದರ್ಭದಲ್ಲಿ ಶಿಕ್ಷಕರಾದ ಎಚ್ ಡಿ ನಿಂಗರೆಡ್ಡಿ ಆರ್ ಎಂ ಶಿರಹಟ್ಟಿ ಎಲ್ ಎ ಬಣಕಾರ ಹಾಗೂ ಶಾಲೆಯ ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 