ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ
ನೇಸರಗಿ 10: ಸಮೀಪದ ವಣ್ಣೂರ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಪಾಟೀಲ ವಹಿಸಿದ್ದರು. ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕರು ಪರಿಸರ ಸಂರಕ್ಷಣೆಯ ಮಹತ್ವ, ಪ್ರಕೃತಿ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಬಳಿಕ ಶಾಲಾ ಆವರಣದಲ್ಲಿ ಹಣ್ಣಿನ ಹಾಗೂ ಹೂವಿನ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರಿ್ಡಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಾಳೂಕು ಕೃಷಿ ಮೇಲ್ವಿಚಾರಕ ರವಿ ಆರಿ್ಜ. ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.