ಪರಿಸರ ಜಾಗೃತಿ ಕಾರ್ಯಕ್ರಮ
Environmental awareness programme
ಪರಿಸರ ಜಾಗೃತಿ ಕಾರ್ಯಕ್ರಮ
ಕಾರವಾರ 16: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆಯ ನಿಮಿತ್ತ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಕಾರವಾರ ಹಾಗೂ ಮೆ. ಗ್ರಾಸಿಮ್ ಇಂಡಸಿೊಥಸ್ ಲಿಮಿಟೆಡ್ ಕೆಮಿಕಲ್ ಡಿವಿಜನ್, ಬಿಣಗಾ ಇವರ ಸಹಯೋಗದೊಂದಿಗೆ ಮೆ. ಗ್ರಾಸಿಮ್ ಇಂಡಸಿೊಥಸ್ ಲಿಮಿಟೆಡ್ ಕೆಮಿಕಲ್ ಡಿವಿಜನ್, ಬಿಣಗಾ ಇಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗುರುವಾರ ನಡೆಯಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ ಕಂಪನಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷಢ್ಪರಿಣಾಮಗಳು, ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ, ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ಧಮಾಲಿನ್ಯ ಜೀವ ವೈದ್ಯಕೀಯ ತ್ಯಾಜ್ಯ, ಅಪಾಯಕಾರಿ ತ್ಯಾಜ್ಯ ಇವುಗಳಿಂದ ಪರಿಸರದ ಮೇಲಾಗುವ ದುಷಢ್ಪರಿಣಾಮಗಳು, ಮತ್ತು ಇವುಗಳ ನಿರ್ವಹಣೆ ಹಾಗೂ ನಿರ್ವಹಣೆಯಲ್ಲಿ ಮಂಡಳಿಯ ಕಾರ್ಯವೈಖರಿ ಬಗ್ಗೆ ವಿವರಿಸಿದರು. ಜಾಗೃತಿ ಕಾರ್ಯಕ್ರಮದಲ್ಲಿ ಕಂಪನಿಯ ಅಧಿಕಾರಿ ಶಿವಕುಮಾರ ಶರ್ಮಾ (ಹೆಡ್ ಫೈನಾನ್ಸ್ ್ಘ ಕಮರ್ಶಿಯಲ್), ಬಿಜನ್ ನಾಯಕ, (ಹೆಡ್-ಟೆಕ್ನಿಕಲ್), ಶ್ರೀ. ರಾಮ ಶರ್ಮಾ (ಹೆಡ್-ಇಹೆಚ್‌ಎಸ್), ನಾಗರಾಜ ಸುತಾರ್ (ಹೆಡ್-ಇಆರ್), ಪ್ರಭಾತ ಪಾಂಡೆ, (ಹೆಡ್-ಹೆಚ್‌ಆರ್) ಹಾಗೂ ಇತರೇ ಘಟಕದ ಮುಖ್ಯಸ್ಥರು ಮತ್ತು ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 