ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜೀವನಶೈಲಿಯಾಗಬೇಕು: ಎಸ್ಪಿ ಡಾ. ಸುಮನ ಡಿ. ಪೆನ್ನೇಕರ್
Environmental conservation must become a part of everyone's lifestyle: SP Dr. Sumana D. Pennekar
ಲೋಕದರ್ಶನ ವರದಿ
ಬಳ್ಳಾರಿ 4: ಪರಿಸರ ಸಂರಕ್ಷಣೆ ಹಾಗೂ ಮರಗಳನ್ನು ಬೆಳೆಸುವುದು ಕೇವಲ ವರ್ಷಕ್ಕೊಮ್ಮೆ ಆಚರಿಸುವ ಕಾರ್ಯಕ್ರಮವಾಗಿರದೆ, ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಡಿ. ಪೆನ್ನೇಕರ್ ಹೇಳಿದರು. ವನಮಹೋತ್ಸವ-2026 ಅಂಗವಾಗಿ ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗವು ಆಯೋಜಿಸಿದ್ದ ‘ಗ್ರೀನ್ ಮಾರ್ಚ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಳ್ಳಾರಿಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಹಸಿರು ಪರಿಸರವೇ ಇದಕ್ಕೆ ಶಾಶ್ವತ ಪರಿಹಾರವಾಗಿದೆ. ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಬಹುದು ಎಂದು ಅವರು ತಿಳಿಸಿದರು.
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ. ಶಾಲಾ ಹಂತದಲ್ಲಿಯೇ ಗಿಡ ನೆಡುವುದು, ಅವುಗಳನ್ನು ಸಂರಕ್ಷಿಸುವ ಅಭ್ಯಾಸ ಬೆಳೆಸಿದರೆ ಪರಿಸರದ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್ ಮಾತನಾಡಿ, ಪರಿಸರ ಉಳಿದರೆ ಮಾತ್ರ ಮಾನವ ಅಸ್ತಿತ್ವ ಉಳಿಯಲಿದೆ. ಸುಸ್ಥಿರ ಅಭಿವೃದ್ಧಿಗೆ ಎಲ್ಲರೂ ಅರಣ್ಯೀಕರಣ ಮತ್ತು ಸಾಮಾಜಿಕ ಅರಣ್ಯ ಕಾರ್ಯಕ್ರಮಗಳಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಎಸ್‌ಐಆರ್ ಕುರಿತು ಜಾಗೃತಿ
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂಬುದನ್ನು ಪರೀಶೀಲಿಸಿ, ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ತಿಳಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ್ ಮಾತನಾಡಿ, ಜುಲೈ 1ರಿಂದ 7ರವರೆಗೆ ವನಮಹೋತ್ಸವ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಪರಿಸರ ಸಂರಕ್ಷಣೆ ಮತ್ತು ಹಸಿರು ವಿಸ್ತರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.
ಬಳಿಕ ಗ್ರೀನ್ ಮಾರ್ಚ್ಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು. ಪ್ರಾದೇಶಿಕ ಅರಣ್ಯ ವಿಭಾಗದ ಕಚೇರಿಯಿಂದ ಆರಂಭವಾದ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಟಿ.ಬಿ. ಸ್ಯಾನಿಟೋರಿಯಂ ಆವರಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಗಿಡ ನೆಡುವ ಕಾರ್ಯಕ್ರಮವೂ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಕೆ. ಗೀರೀಶ್ ಕುಮಾರ್, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 